ಸಮಗ್ರ ನ್ಯೂಸ್: ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸರ್ಕಾರ ಮತ್ತು ಕೋರ್ಟ್ ನೀಡಿದ್ದ ಡೆಡ್ ಲೈನ್‌ಗೆ ಕೇವಲ ಒಂದು ವಾರ ಮಾತ್ರ ಬಾಕಿ ಇದ್ದು, ಸೆಪ್ಟೆಂಬರ್ 15ಕ್ಕೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕೊಟ್ಟಿರುವ ಡೆಡ್ಲೈನ್ ಮುಗಿಯಲಿದೆ.
ರಾಜ್ಯದಲ್ಲಿ ಒಟ್ಟಾರೆ 2 ಕೋಟಿಯಷ್ಟು ವಾಹನಗಳಿದ್ದು. ಇದರಲ್ಲಿ ಇಲ್ಲಿಯವರೆಗೆ 51 ಲಕ್ಷ ವಾಹನಗಳು ಮಾತ್ರ ಹೆಚ್‌ಎಸ್‌ಆರ್‌ಪಿ ನಂಬರ್ ಹಾಕಿಸಿದ್ದಾರೆ. ಉಳಿದ 1.49 ಕೋಟಿ ವಾಹನಗಳು ಇನ್ನೂ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಹಾಕಿಸಿಲ್ಲ. ಸೆ.16ರಿಂದಲೇ ನಮ್ಮ ಇಲಾಖೆಯಿಂದ ಎಲ್ಲಾ ಜಿಲ್ಲೆಗಳಲ್ಲೂ ಸ್ಪೆಷಲ್ ಡ್ರೈವ್ ಮಾಡಿ 500 ರೂ. ದಂಡ ಹಾಕುತ್ತೇವೆ. ಮೊದಲ ಸಲ 500 ರೂ. ದಂಡ ವಿಧಿಸಿದರೇ ಎರಡನೇ ಸಲಕ್ಕೆ 1,000 ರೂ. ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.