Ad Widget .

ಮಂಗಳೂರು: ತಾಯಿಯನ್ನು ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

ಸಮಗ್ರ ನ್ಯೂಸ್: ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ತಾಯಿಗೆ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು.

Ad Widget . Ad Widget .

7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿದ ಜಿಲ್ಲಾಧಿಕಾರಿಗಳು, ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು.

Ad Widget . Ad Widget .

ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಉಪನಿರ್ದೇಶಕ ಹೇಮಲತಾ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಮತ್ತು ವೈಭವಿ ಪಾಲಕರು ಉಪಸ್ಥಿತರಿದ್ದರು. ವೈಭವಿಯ ಧೈರ್ಯವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೂ ಸಾಮಾಜಿಕ ಜಾಲತಾಣದಲ್ಲಿ ಶ್ಲಾಘಿಸಿದ್ದರು.

Leave a Comment

Your email address will not be published. Required fields are marked *