ಸಮಗ್ರ ನ್ಯೂಸ್: ರಾಜ್ಯದಲ್ಲಿ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಸುಮಾರು 20 ಲಕ್ಷಕ್ಕೂ ಹೆಚ್ಚು ಕಾರ್ಡ್ ಗಳನ್ನು ರದ್ದುಪಡಿಸಲು ಆಹಾರ ಇಲಾಖೆ ಚಿಂತನೆ ನಡೆಸಿದೆ.
ಅನರ್ಹ ಕಾರ್ಡ್ ಗಳನ್ನು ರದ್ದು ಮಾಡಲು ಆಹಾರ ಇಲಾಖೆ ಸಿದ್ಧತೆ ನಡೆಸಿದ್ದು, ಅನರ್ಹರ ಪತ್ತೆ ಹಚ್ಚಲು ಖಾಸಗಿ ಸಂಸ್ಥೆಗೆ ಸಮೀಕ್ಷೆ ಹೊಣೆ ನೀಡಲು ಪ್ಲಾನ್ ಮಾಡಲಾಗಿದೆ.
ಅನ್ನಭಾಗ್ಯ ಯೋಜನೆಯ ಅನಗತ್ಯ ವೆಚ್ಚ ಉಳಿಸಲು ಈ ಕಾರ್ಡ್ ಗಳನ್ನು ರದ್ದು ಮಾಡಲು ಚಿಂತನೆ ನಡೆಸಲಾಗಿದೆ. ಆಹಾರ ಭದ್ರತೆ ಕಾಯ್ದೆಯ ಪ್ರಕಾರ ರಾಜ್ಯದಲ್ಲಿ 1.03 ಕೋಟಿ ಬಿಪಿಎಲ್ ಕಾರ್ಡ್ ಗಳು ಇರಬೇಕು. ಆದರೆ, 1.16 ಕೋಟಿಗೂ ಹೆಚ್ಚು ಬಿಪಿಎಲ್ ಕಾರ್ಡುಗಳನ್ನು ವಿತರಿಸಲಾಗಿದೆ.