ಸಮಗ್ರ ನ್ಯೂಸ್: ತೀವ್ರ ಶ್ವಾಸಕೋಶದ ಸೋಂಕಿನಿಂದಾಗಿ ದೆಹಲಿಯ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ನಿಧನರಾಗಿದ್ದಾರೆ.
72 ವರ್ಷದ ಯೆಚೂರಿ ಅವರನ್ನು ಆಗಸ್ಟ್ 19 ರಂದು ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲಿಸಲಾಗಿತ್ತು. ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಸದಸ್ಯರಾದ ಒಂದು ವರ್ಷದ ನಂತರ 1975 ರಲ್ಲಿ ಸೀತಾರಾಮ್ ಯೆಚೂರಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ) ಗೆ ಸೇರಿದರು.
ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ (ಜೆಎನ್ ಯು) ವಿದ್ಯಾರ್ಥಿಯಾಗಿದ್ದಾಗ ತುರ್ತು ಪರಿಸ್ಥಿತಿಯ ಸಮಯದಲ್ಲಿ ಅವರನ್ನು ಬಂಧಿಸಲಾಗಿತ್ತು. 1977 ಮತ್ತು 1988 ರ ನಡುವೆ ಮೂರು ಬಾರಿ ಜೆಎನ್ಯು ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 2004 ರಲ್ಲಿ ಯುಪಿಎ ಸರ್ಕಾರವನ್ನು ರಚಿಸುವಲ್ಲಿ ಸೀತಾರಾಂ ಯೆಚೂರಿ ಮಹತ್ವದ ಪಾತ್ರವನ್ನು ವಹಿಸಿದರು.