ಸಮಗ್ರ ನ್ಯೂಸ್: ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತನ್ನ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ನಿರ್ಣಾಯಕ ತೀರ್ಪು ನೀಡಿದೆ.
ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ತೀರ್ಪು ನೀಡಿದೆ. ನ್ಯಾಯಪೀಠವು ಸೆಪ್ಟೆಂಬರ್ ೫ ರಂದು ಅರ್ಜಿಗಳ ಮೇಲಿನ ತೀರ್ಪನ್ನು ಕಾಯ್ದಿರಿಸಿತ್ತು.
ಮದ್ಯ ನೀತಿ ಹಗರಣದಿಂದ ಉದ್ಭವಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿ ಮುಖ್ಯಸ್ಥರನ್ನು ಜೂನ್ 26 ರಂದು ಸಿಬಿಐ ಬಂಧಿಸಿತ್ತು.ಜುಲೈ 12 ರಂದು, ಸುಪ್ರೀಂ ಕೋರ್ಟ್ ಇಡಿ ಪ್ರಕರಣದಲ್ಲಿ ಮುಖ್ಯಮಂತ್ರಿಗೆ ಮಧ್ಯಂತರ ಜಾಮೀನು ನೀಡಿತು. ಇಡಿ ಬಂಧನವನ್ನು ಪ್ರಶ್ನಿಸಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಯಿತು. ಆದಾಗ್ಯೂ, ಸಿಬಿಐ ಬಂಧನದಿಂದಾಗಿ ಅವರು ತಿಹಾರ್ ಜೈಲಿನಲ್ಲಿದ್ದರು.


















