ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕಿಂಗ್‌ ನ್ಯೂಸ್‌/ ಪರೀಕ್ಷಾ ಅವಧಿ ೧೫ ನಿಮಿಷ ಕಡಿತ

ಸಮಗ್ರ ನ್ಯೂಸ್‌: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿಗದಿಯಾಗಿದ್ದ ಸಮಯವನ್ನು ಈ ವರ್ಷದಿಂದ ಕಡಿತ ಮಾಡಿಲಾಗಿದ್ದು, ವಿದ್ಯಾರ್ಥಿಗಳಿಗೆ ಶಾಕ್‌ ನೀಡಿದೆ. ಸಮಯ ಕಡಿತ ಮಾಡಿರುವ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದ್ದು, 2024-25ನೇ ಸಾಲಿನ ಪರೀಕ್ಷೆಯಿಂದಲೇ ಜಾರಿ ಆಗಲಿದೆ.

Ad Widget ... ..

ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆ ವೆಬ್ ಸೈಟ್ ನಲ್ಲಿ ಪ್ರಕಟ ಮಾಡಿದೆ. ದ್ವಿತೀಯ ಪಿಯುಸಿ ಪರೀಕ್ಷೆಯ ಅವಧಿಯನ್ನು 15 ನಿಮಿಷಗಳ ಕಾಲ ಇಳಿಕೆ ಮಾಡುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಘೋಷಿಸಿದೆ. ಇದರಿಂದಾಗಿ, 3 ಗಂಟೆಗಳ ಕಾಲ ಬರೆಯಬೇಕಿದ್ದ ಪರೀಕ್ಷೆ ಅವಧಿ 2 ಗಂಟೆ 45 ನಿಮಿಷಕ್ಕೆ ಇಳಿಕೆಯಾಗಲಿದೆ.

Ad Widget

ಈ ಮೊದಲು ವಿದ್ಯಾರ್ಥಿಗಳು ಉತ್ತರ ಬರೆಯಲು 3 ಗಂಟೆ 15 ನಿಮಿಷ ಸಮಯ ಕೊಡಲಾಗಿತ್ತು.3 ಗಂಟೆ ಉತ್ತರ ಬರೆಯಲು ಮತ್ತು 15 ನಿಮಿಷಗಳು ಪ್ರಶ್ನೆ ಪತ್ರಿಕೆ ಓದಲು ನೀಡಲಾಗುತ್ತಿತ್ತು. ಹೊಸ ನಿಯಮದ ಪ್ರಕಾರ ಉತ್ತರ ಬರೆಯಲು 2 ಗಂಟೆ 45 ನಿಮಿಷ ಸಮಯ ಮತ್ತು 15 ನಿಮಿಷ ಪ್ರಶ್ನೆ ಪತ್ರಿಕೆ ಓದಲು ಅವಕಾಶ ನೀಡಲಾಗಿದ್ದು, 15 ನಿಮಿಷ ಸಮಯವನ್ನು ಕಡಿತ ಮಾಡಲಾಗಿದೆ.

Leave a Comment

Your email address will not be published. Required fields are marked *