Ad Widget .

ಮದ್ಯ ನೀತಿ ಪ್ರಕರಣ/ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್‌: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ ಅವರನ್ನು ಸಿಬಿಐ ಬಂಧಿಸಿತ್ತು. ಕೇಜ್ರಿವಾಲ್‌ ಅವರು ಸಿಬಿಐ ಬಂಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪು ಪ್ರಕಟಿಸಿತು.

Ad Widget . Ad Widget .

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್‌, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು.

Ad Widget . Ad Widget .

Leave a Comment

Your email address will not be published. Required fields are marked *