ಮಂಡ್ಯ: ನಾಗಮಂಗಲಕ್ಕೆ ಬಾರದಂತೆ ಪ್ರಮೋದ್ ಮುತಾಲಿಕ್ ಗೆ ನಿರ್ಬಂಧ

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ಉತ್ಸವದ ಮೆರವಣಿಗೆ ವೇಳೆ ರಾತ್ರಿ ಕೆಲವು ಜನರು ಕಲ್ಲು ತೂರಾಟ ನಡೆಸಿ ಗಲಭೆ ಸೃಷ್ಟಿಸಿದ್ದರು. ಬಳಿಕ ಮಚ್ಚು, ಲಾಂಗ್ ತೋರಿಸಿ, ಪೆಟ್ರೋಲ್ ಬಾಂಬ್ ಕೂಡ ಎಸೆದಿದ್ದರು. ಈ ಕೃತ್ಯಕ್ಕೆ ಶ್ರೀರಾಮ ಸೇನೆಯ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ಷೇಪ ವ್ಯಕ್ತಪಡಿಸಿ, ತಪ್ಪಿಸ್ಥರಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದರು.

Ad Widget ... ..

ಬಜರಂಗದಳದ ನಾಯಕ ಪ್ರಮೋದ್ ಮುತಾಲಿಕ್‌ ಇಂದು ನಾಗಮಂಗಲಕ್ಕೆ ಆಗಮಿಸುವುದಾಗಿ ತಿಳಿಸಿದ್ದರು. ಆದರೆ, ಅವರಿಗೆ ನಾಗಮಂಗಲಕ್ಕೆ ಬಾರದಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಹೀಗಾಗಿ, ಇಂದು ನಾಗಮಂಗಲದಲ್ಲಿ ಗಲಭೆ ನಡೆದ ಸ್ಥಳಕ್ಕೆ ಬರುವ ಪ್ಲಾನ್ ಹಾಕಿಕೊಂಡಿದ್ದ ಮುತಾಲಿಕ್ ತಮ್ಮ ಭೇಟಿಯನ್ನು ರದ್ದುಪಡಿಸಿದ್ದಾರೆ.

Ad Widget

Leave a Comment

Your email address will not be published. Required fields are marked *