Ad Widget .

ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮೋದಿ ಪ್ರಚಾರ ಸಭೆ/ 42 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿಯೊಬ್ಬರ ದೋಡಾ ಭೇಟಿ

ಸಮಗ್ರ ನ್ಯೂಸ್‌: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ದೊಡಾ ಜಿಲ್ಲೆಯಲ್ಲಿ ಬಿಗಿ ಭದ್ರತೆ ನಡುವೆ ಬೃಹತ್ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ, ಇಂದು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದಾರೆ. ಕಳೆದ 42 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿಯೊಬ್ಬರು ದೋಡಾಗೆ ಭೇಟಿ ನೀಡುತ್ತಿದ್ದಾರೆ.

Ad Widget . Ad Widget .

ದೋಡಾದ ಸ್ಟೇಡಿಯಂನಲ್ಲಿ ನಡೆಯಲಿರುವ ಚುನಾವಣಾ ಸಭೆಯನ್ನು ಶಾಂತಿಯುತ ಮತ್ತು ಸುಗಮವಾಗಿ ನಡೆಸಲು ದೊಡಾ ಮತ್ತು ಕಿಶ್ಚಾರ್ ಜಿಲ್ಲೆಗಳಾದ್ಯಂತ ಬಿಗಿಭದ್ರತೆ ಏರ್ಪಡಿಸಲಾಗಿದೆ. ಪ್ರಧಾನಿ ಮೋದಿ ದೋಡಾದಲ್ಲಿ ತಮ್ಮ ಮೊದಲ ಚುನಾವಣಾ ಸಭೆ ನಡೆಸಲಿದ್ದಾರೆ. 42 ವರ್ಷಗಳಲ್ಲಿ ಪ್ರಧಾನಿಯೊಬ್ಬರು ಇದೇ ಮೊದಲ ಬಾರಿಗೆ ದೋಡಾಗೆ ಭೇಟಿ ನೀಡುತ್ತಿರುವ ಕಾರಣ ಇದು ಮಹತ್ವದ ಘಟನೆಯಾಗಿದೆ. 1982 ರಲ್ಲಿ ಕೊನೆಯದಾಗಿ ಪ್ರಧಾನಿಯೊಬ್ಬರು ದೋಡ್ಯಾಗೆ ಭೇಟಿ ನೀಡಿದ್ದರು ಎಂದು ಕೇಂದ್ರ ಸಚಿವ ಹಾಗೂ ಜಮ್ಮು- ಕಾಶ್ಮೀರದ ಬಿಜೆಪಿ ಚುನಾವಣಾ ಉಸ್ತುವಾರಿ ಜಿ ಕಿಶನ್ ರೆಡ್ಡಿ ಶುಕ್ರವಾರ ಸಾಂಬಾದಲ್ಲಿ ಹೇಳಿದರು.

Ad Widget . Ad Widget .

Leave a Comment

Your email address will not be published. Required fields are marked *