ಸಮಗ್ರ ನ್ಯೂಸ್: ಮುಂದಿನ ಎರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜಿವಾಲ್ ಘೋಷಿಸಿದ್ದಾರೆ. ತಮ್ಮ ವಿರುದ್ಧ ಬಿಜೆಪಿ ಸುಳ್ಳು ಟೀಕೆ ಮಾಡಿದೆ ಎಂದು ಕೇಜ್ರವಾಲ್ ಹೇಳಿದ್ದಾರೆ. ಆದ್ದರಿಂದ ನಾವು ಸಾರ್ವಜನಿಕ ನ್ಯಾಯಾಲಯಕ್ಕೆ ಮನವಿ ಮಾಡುತ್ತೇವೆ ಎಂದು ಕೇಜ್ರಿವಾಲ್ ಹೇಳಿದರು, ಮುಖ್ಯಮಂತ್ರಿ ಸ್ಥಾನಕ್ಕೆ ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರು ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ನವೆಂಬರ್‌ನಲ್ಲಿ ದೆಹಲಿಯಲ್ಲಿ ಚುನಾವಣೆ ನಡೆಸುವಂತೆ ಎಎಪಿ ಸಂಘಟಕರು ಚುನಾವಣಾ ಆಯೋಗವನ್ನು ಕೋರಿದ್ದಾರೆ. ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಮದ್ಯದ ಹಗರಣದಲ್ಲಿ ಜೈಲು ಪಾಲಾಗಿದ್ದ ಅರವಿಂದ್ ಕೇಜ್ರವಾಲ್ ಅವರು ದೆಹಲಿಯ ಜನರು ನಿರ್ಧಾರ ತೆಗೆದುಕೊಳ್ಳುವವರೆಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.