Ad Widget .

ಮಂಗಳೂರು: ಮಸೀದಿಗೆ ಕಲ್ಲೆಸೆದ ಪ್ರಕರಣ| ಐದು ಮಂದಿಯನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕಾಟಿಪಳ್ಳ 3ನೇ ಬ್ಲಾಕ್ ನ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣ ಸಂಬಂಧ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ಬಂಧಿತರು ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಖಂಡಿಗೆ ಪಾಡಿ ನಿವಾಸಿ ನಿತಿನ್, ಈಶ್ವರ ನಗರ ನಿವಾಸಿ ಮನು, ಮುಂಚೂರು ನಿವಾಸಿ ಸುಜಿತ್ ಎಂದು ತಿಳಿದು ಬಂದಿದೆ.

Ad Widget . Ad Widget .

ಆರೋಪಿಗಳು ಜನತಾ ಕಾಲನಿ ಸ್ಮಶಾನದ ಕಡೆಯಿಂದ ಎರಡು ಬೈಕ್ ಗಳಲ್ಲಿ ಬಂದು, ಮಸೀದಿಯ ಹಿಂಭಾಗದ ಕಿಟಕಿಗಳ ಮೇಲೆ ಕಲ್ಲು ತೂರಾಟ ಮಾಡಿದ್ದರು ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *