ಸಮಗ್ರ ನ್ಯೂಸ್: ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯೊಂದನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅನುಷ್ಠಾನಕ್ಕೆ ತರಲು ಹೊರಟಿದೆ.
ಒಂದು ದೇಶ ಒಂದು ಚುನಾವಣೆ ಮಸೂದೆಯನ್ನು ಮುಂಬರುವ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಸರ್ಕಾರ ಮಂಡಿಸಿದೆ.ಈ ಚುನಾವಣೆ ಕಾರ್ಯಸಾಧ್ಯತೆ ಬಗ್ಗೆ ಕಳೆದ ಮಾರ್ಚ್‌ನಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯಲ್ಲಿ ವರದಿ ನೀಡಿದ್ದರು.
ಕಳೆದ ಆಗಸ್ಟ್ 15ರಂದು ಕೆಂಪು ಕೋಟೆಯಿಂದ ಮಾಡಿದ ಭಾಷಣದಲ್ಲೂ ಪ್ರಧಾನಿ ನರೇಂದ್ರ ಮೋದಿಯವರು ಈ ಚುನಾವಣೆಯ ಅಗತ್ಯವನ್ನು ಒತ್ತಿ ಹೇಳಿದ್ದರು ಜೊತೆಗೆ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವ ಮಸೂದೆ ಕೂಡಾ ಮಂಡನೆಯಾಗಲಿದೆ ಎನ್ನಲಾಗಿದೆ.