ಎರಡು ತಿಂಗಳ ‘ಗೃಹಲಕ್ಷ್ಮಿ’ ಹಣ ಒಟ್ಟಾಗಿ ಜಮೆ – ಲಕ್ಷ್ಮಿ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ರಾಜ್ಯದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಸ್ಥಗಿತ ಆಗುವುದಿಲ್ಲ. ಇದು ನಿತ್ಯ, ಸತ್ಯ, ನಿರಂತರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

Ad Widget ... ..

ನಾನು ಈಗಾಗಲೆ ಹಲವು ಬಾರಿ ಗೃಹಲಕ್ಷ್ಮೀ ಯೋಜನೆ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಮತ್ತೊಮ್ಮೆ ಸ್ಪಷ್ಟನೆ ಕೊಡುತ್ತಿದ್ದೇನೆ. ಕಳೆದೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಪಾವತಿಯಾಗಲಿದೆ ಎಂದು ತಿಳಿಸಿದರು.

Ad Widget

ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ ಹಿಂದಷ ಅರ್ಜಿ ಹಾಕಲು ಅವಕಾಶ ನೀಡಲಾಗಿತ್ತು. ಅವರಿಗೂ ಕೂಡ ಅಷ್ಟು ಬಾಕಿ ಹಣ ಒಟ್ಟಿಗೆ ಜಮಾ ಆಗಲಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು.

Leave a Comment

Your email address will not be published. Required fields are marked *