Ad Widget .

ದೇಶಾದ್ಯಂತ ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ತಡೆ

ಸಮಗ್ರ ನ್ಯೂಸ್: ತನ್ನ ಅನುಮತಿಯಿಲ್ಲದೆ ದೇಶದಲ್ಲಿ ಬುಲ್ಡೋಜರ್ ಬಳಸಿ ಯಾವುದೇ ನೆಲಸಮಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ತಡೆ ನೀಡಿದೆ. ಆದಾಗ್ಯೂ, ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು, ರೈಲ್ವೆ ಮಾರ್ಗಗಳು, ಜಲಮೂಲಗಳ ಅತಿಕ್ರಮಣಗಳಿಗೆ ಈ ತಡೆಯಾಜ್ಞೆ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

Ad Widget . Ad Widget .

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ನ್ಯಾಯಪೀಠವು ದಂಡನಾತ್ಮಕ ಕ್ರಮವಾಗಿ ಅಪರಾಧಗಳ ಆರೋಪ ಹೊತ್ತಿರುವ ವ್ಯಕ್ತಿಗಳ ಕಟ್ಟಡಗಳನ್ನು ನೆಲಸಮಗೊಳಿಸುವಲ್ಲಿ ವಿವಿಧ ರಾಜ್ಯ ಸರ್ಕಾರಗಳ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯಲ್ಲಿ ಈ ನಿರ್ದೇಶನವನ್ನು ನೀಡಿದೆ. ಅ.1ರವರೆಗೆ ತಡೆಯಾಜ್ಞೆ ಜಾರಿಯಲ್ಲಿರುತ್ತದೆ.

Ad Widget . Ad Widget .

Leave a Comment

Your email address will not be published. Required fields are marked *