Ad Widget .

‘ಧರ್ಮಸ್ಥಳ ಸಂಘದಲ್ಲಿ ಧರ್ಮವೇ ಇಲ್ಲ, ಕೊಟ್ಟ ಸಾಲಕ್ಕೆ 40% ಬಡ್ಡಿ’| ಗಂಭೀರ ಆರೋಪ ಮಾಡಿದ ಶಾಸಕ ನರೇಂದ್ರ ಸ್ವಾಮಿ

ಸಮಗ್ರ ನ್ಯೂಸ್: ಧರ್ಮಸ್ಥಳ ಸಂಘದ ವಿರುದ್ದ ಶಾಸಕ ನರೇಂದ್ರ ಸ್ವಾಮಿ ಗಂಭೀರ ಆರೋಪ ಮಾಡಿದ್ದು, ಹೆಸರಿಗಷ್ಟೇ ಅದು ಧರ್ಮಸ್ಥಳ ಸಂಘ, ಅದರಲ್ಲಿ ಧರ್ಮವೇ ಇಲ್ಲ . ಆ ಸಂಘದಲ್ಲಿ ಧರ್ಮದ ಕೆಲಸವೇ ಇಲ್ಲ. ಕೊಟ್ಟ ಸಾಲಕ್ಕೆ ಬಡವರಿಂದ ಶೇ 40ರಷ್ಟು ಬಡ್ಡಿ ವಸೂಲಿ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

Ad Widget . Ad Widget .

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಲ್ಲಿ ಧರ್ಮದ ಕೆಲಸವೇ ಇಲ್ಲ. ಕೊಟ್ಟ ಸಾಲಕ್ಕೆ ಬಡವರಿಂದ ಶೇ 40ರಷ್ಟು ಬಡ್ಡಿ ವಸೂಲಿ ಮಾಡಲಾಗುತ್ತಿದೆ ಎಂದು ಶಾಸಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಸಂಘವು ಮಹಿಳಾ ಸಂಘಗಳಿಗೆ ಸಾಲ ನೀಡಿ ಶೇ.40ರಷ್ಟು ಬಡ್ಡಿ ವಸೂಲಿ ಮಾಡುವ ಮೂಲಕ ಗ್ರಾಮೀಣ ಭಾಗದ ಮಹಿಳೆಯರನ್ನು ಶೋಷಣೆ ಮಾಡುತ್ತಿದೆ ಎಂದು ದೂರಿದ್ದಾರೆ.

Ad Widget . Ad Widget .

ಕಡಿಮೆ ಹಣ ನೀಡಿ, ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿದ್ದಾರೆ. ಇದು ಜನರಿಗೆ ಅರ್ಥವಾಗುತ್ತಿಲ್ಲ. ಅದು ಹೆಸರಿಗಷ್ಟೇ ಧರ್ಮಸ್ಥಳ ಸಂಘ ಎನಿಸಿಕೊಂಡಿದೆ. ಆದರೆ, ಅಲ್ಲಿ ಧರ್ಮದ ಕೆಲಸಗಳು ನಡೆಯುತ್ತಿಲ್ಲ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವು ಬಡವರನ್ನು ಸಂಕಷ್ಟಕ್ಕೆ ಸಿಲುಕಿಸಲು ಮುಂದಾಗಿದೆ. ಮಹಿಳೆಯರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವನ್ನು ಬಿಟ್ಟು, ನಮ್ಮ ಸರ್ಕಾರದ ಸಂಜೀವಿನಿ ಯೋಜನೆಯ ಮೂಲಕ ಆರ್ಥಿಕ ಚಟುವಟಿಕೆ ಆರಂಭಿಸಿ, ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

10, 20 ಸಾವಿರ ರೂಪಾಯಿ ಸಾಲ ಪಡೆದು ಹೆಚ್ಚಿಗೆ ಬಡ್ಡಿ ಕಟ್ಟಿಸಿಕೊಳ್ಳುತ್ತಾರೆ. ಆದರೆ, ಜನರಿಗೆ ಇದು ಗೊತ್ತಾಗುತ್ತಿಲ್ಲ. ಅದು ಹೆಸರಿಗಷ್ಟೆ ಧರ್ಮಸ್ಥಳ ಸಂಘ. ಧರ್ಮಸ್ಥಳ ಸಂಘದಲ್ಲಿ ಧರ್ಮದ ಕಾರ್ಯ ನಡೆಯುತ್ತಿಲ್ಲ. ಆ ಶೋಷಣೆ ತಪ್ಪಿಸಲು ತಿಂಗಳಿಗೆ 2 ಸಾವಿರ ಕೊಡುತ್ತಿದ್ದೇವೆ ಎಂದು ನರೇಂದ್ರಸ್ವಾಮಿ ಹೇಳಿದ್ದಾರೆ.

Leave a Comment

Your email address will not be published. Required fields are marked *