ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಮಾನ ಆಗುವ ರೀತಿಯಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಬೆಳ್ತಂಗಡಿ ಶಾಸಕ ಹರೀಶ್ ಪೂಜಾ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ, ಅವರ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಅವಮಾನ ಅಗುವ ರೀತಿಯಲ್ಲಿ ನಿವಾಸದ ಫೋಟೋ ಮತ್ತು ಕಚೇರಿಯಲ್ಲಿ ಕುಳಿತಿರುವ ಫೋಟೋಗಳನ್ನು ಬಳಸಿ ಅದನ್ನು ಎಡಿಟ್ ಮಾಡಿ ಸಿದ್ದರಾಮಯ್ಯ ಕಲೆಕ್ಟರ್ ಮಾಸ್ಟರ್ (CM) ಎಂದು ಪೋಸ್ಟ್ ಹಾಕಿದ್ದರು.
ಈ ಒಂದು ಪೋಸ್ಟ್ ಗೆ ಸಂಬಂಧಿಸಿದಂತೆ ಬೆಳ್ತಂಗಡಿ ಕಾಂಗ್ರೆಸ್ ಮುಖಂಡ ಶೇಖರ್ ಕುಕ್ಕೇಡಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಬೆಳ್ತಂಗಡಿ ಪೊಲೀಸರು ಕಳೆದ 2023 ರ ಅಕ್ಟೊಬರ್ 26 ರಂದು IPC ಸೆಕ್ಷನ್ 1860(U/s-504,505(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶಾಸಕ ಹರೀಶ್ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.