Ad Widget .

ಒಂದು ರಾಷ್ಟ್ರ, ಒಂದು ಚುನಾವಣೆ/ ಕೇಂದ್ರ ಸಚಿವ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್‌: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ಸಲ್ಲಿಸಿದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಯನ್ನು ನೀಡಿದೆ. ಕೇಂದ್ರ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕಳೆದ ತಿಂಗಳು ಸ್ವಾತಂತ್ರ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ, ಪದೇ ಪದೇ ಚುನಾವಣೆಗಳು ನಡೆಯುವುದರಿಂದ ದೇಶದ ಪ್ರಗತಿಗೆ ಅಡ್ಡಿಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ನರೇಂದ್ರ ಮೋದಿ ಅವರ ಈ ಹೇಳಿಕೆಯ ಬಳಿಕ ಈ ಬೆಳವಣಿಗೆ ನಡೆದಿದೆ. ಪ್ರಸ್ತುತ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತನ್ನ ಪ್ರಸ್ತುತ ಅಧಿಕಾರಾವಧಿಯಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಜಾರಿಗೆ ತರಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿತ್ತು ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮೂರನೇ ಅವಧಿಯ 100 ದಿನಗಳನ್ನು ಪೂರೈಸಿದ ನಂತರ, ಆಡಳಿತಾರೂಢ ಮೈತ್ರಿಕೂಟದಲ್ಲಿನ ಒಗ್ಗಟ್ಟು ಉಳಿದ ಅವಧಿಯಲ್ಲೂ ಉಳಿಯುತ್ತದೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಹೊರಡಿಸಿದ್ದ ಪುಣಾಳಿಕೆಯಲ್ಲಿ ಒಂದು ದೇಶ, ಒಂದು ಚುನಾವಣೆ ಎಂಬುದನ್ನೂ ಪ್ರಮುಖ ಭರವಸೆಯಾಗಿ ಸೇರಿಸಲಾಗಿತ್ತು.

Ad Widget . Ad Widget . Ad Widget .

Leave a Comment

Your email address will not be published. Required fields are marked *