ಸಮಗ್ರ ನ್ಯೂಸ್: ಆಹಾರದ ನಾರಿನಾಂಶವನ್ನು ಹೊಂದಿರುವಂತಹ ಇದು ವಿರೇಚಕ ಗುಣವನ್ನು ಸಪೋಟ ಹಣ್ಣು ಹೊಂದಿದೆ.ವಿಟಮಿನ್ ಸಿ,ಎ,ನಿಯಾಸಿನ್ ಫಾಲಟೆ ಮತ್ತು ಖನಿಜಾಂಶಗಳಾಗಿರುವಂತಹ ಕಬ್ಬಿನಾಂಶ, ಪೊಟಾಶಿಯಂ ಮತ್ತು ತಾಮ್ರವಿದೆ.
100 ಗ್ರಾಂ ಸಪೋಟ ದಲ್ಲಿ 83 ಕ್ಯಾಲರಿ ಇದೆ.ಸಪೋಟ ಹಣ್ಣಿನಲ್ಲಿ ಸಸ್ಯಜನ್ಯವಾಗಿರುವಂತಹ ಪಾಲಿಪೆನಾಲ್ ಇದ್ದು, ಹೊಟ್ಟೆಯಲ್ಲಿ ಇದು ಆಮ್ಲದ ಸ್ರವಿಸುವಿಕೆಯನ್ನು ತಟಸ್ಥಗೊಳಿಸುವುದು. ಪರಾವಲಂಬಿ ವಿರೋಧಿ, ವೈರಲ್ ವಿರೋಧಿ, ಉರಿಯೂತ ಶಮನಕಾರಿ ಮತ್ತು ಬ್ಯಾಕ್ಟಿರಿಯಾ ವಿರೋಧಿ ಗುಣ ಹೊಂದಿದೆ.
ಗ್ಯಾಸ್ಟ್ರಿಕ್ ಹಾಗೂ ಜೀರ್ಣಕ್ರಿಯೆಗೆ ಇದು ಸಹಕಾರಿ ಮತ್ತು ಮಲಬದ್ಧತೆ ಇರುವವರಿಗೆ ವಿರೇಚಕವಾಗಿ ವರ್ತಿಸುವುದು.ಇದು ಹೊಟ್ಟೆಯ ಸೋಂಕನ್ನು ತಗ್ಗಿಸುವುದು.ಇದನ್ನು ವ್ಯಾಯಾಮದ ಬಳಿಕ ಸೇವನೆ ಮಾಡಿದರೆ ಅದರಿಂದ ದೇಹಕ್ಕೆ ನೈಸರ್ಗಿಕ ಶಕ್ತಿ ಸಿಗುವುದು.
ಬೆಳೆಯುವ ಮಕ್ಕಳು ಮತ್ತು ಗರ್ಭಿಣಿಯರಿಗೆ ಇದು ತುಂಬಾ ಒಳ್ಳೆಯದು.ಸಪೋಟ ಹಣ್ಣು ತ್ವಚೆಯ ಆರೋಗ್ಯ ಹಾಗೂ ಸೌಂದರ್ಯ ವೃದ್ಧಿಸುವುದು.ಇದರಲ್ಲಿ ಇರುವಂತಹ ವಿಟಮಿನ್ ಎ, ಸಿ, ಇ ಮತ್ತು ಕೆ ಚರ್ಮವನ್ನು ಹೈಡೇಟ್ ಆಗಿಡುವುದು ಮತ್ತು ಚರ್ಮದ ಅಂಗಾಂಶ ಗಳನ್ನು ಪುನರ್ಶ್ಚತನಗೊಳಿಸುವುದು.
ಇದರಲ್ಲಿ ಇರುವಂತಹ ಪೊಟಾಶಿಯಂ ಅಂಶವು ಸೋಡಿಯಂ ಮಟ್ಟವನ್ನು ಕಡಿಮೆ ಮಾಡುವುದು ಮತ್ತು ರಕ್ತ ಸಂಚಾರನ್ನು ಸುಧಾರಿಸುವುದು ಮತ್ತು ರಕ್ತದೊತ್ತಡವನ್ನು ಇದು ನಿಯಂತ್ರಿಸುವುದು.
ಇಲ್ಲಿದೆ ಸಂಪೂರ್ಣ ಮಾಹಿತಿ.