‘ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕೃಷಿ ಭಾಗ್ಯ ಯೋಜನೆಯನ್ನು ಪುನಾರಂಭ ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಕೃಷಿ ಭಾಗ್ಯ ಯೋಜನೆ ಪುನರಾರಂಭ ಮಾಡಲಾಗಿದ್ದು, ಅರ್ಹ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು.
ಯೋಜನೆಯ ಲಾಭ ಪಡೆಯಲು ಆಸಕ್ತ ರೈತರು ಕೃಷಿ ಇಲಾಖೆ ಅಥವಾ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು ಎಂದು ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.
ಸಮಗ್ರ ನ್ಯೂಸ್: ತನ್ನ ಅನುಮತಿಯಿಲ್ಲದೆ ದೇಶದಲ್ಲಿ ಬುಲ್ಡೋಜರ್ ಬಳಸಿ ಯಾವುದೇ ನೆಲಸಮಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ತಡೆ ನೀಡಿದೆ. ಆದಾಗ್ಯೂ, ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು, ರೈಲ್ವೆ ಮಾರ್ಗಗಳು, ಜಲಮೂಲಗಳ ಅತಿಕ್ರಮಣಗಳಿಗೆ ಈ ತಡೆಯಾಜ್ಞೆ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ನ್ಯಾಯಪೀಠವು ದಂಡನಾತ್ಮಕ ಕ್ರಮವಾಗಿ ಅಪರಾಧಗಳ ಆರೋಪ ಹೊತ್ತಿರುವ ವ್ಯಕ್ತಿಗಳ ಕಟ್ಟಡಗಳನ್ನು ನೆಲಸಮಗೊಳಿಸುವಲ್ಲಿ ವಿವಿಧ ರಾಜ್ಯ ಸರ್ಕಾರಗಳ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯಲ್ಲಿ ಈ ನಿರ್ದೇಶನವನ್ನು ನೀಡಿದೆ. ಅ.1ರವರೆಗೆ ತಡೆಯಾಜ್ಞೆ ಜಾರಿಯಲ್ಲಿರುತ್ತದೆ.