ಗಂಡುಮಗುವಿಗೆ ಜನ್ಮ ನೀಡಿದ ಕವಿತಾ ಗೌಡ| ಖುಷಿ ಹಂಚಿಕೊಂಡ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ಚಂದನ್ ಗೌಡ

ಸಮಗ್ರ ನ್ಯೂಸ್: ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಕವಿತಾ ಗೌಡ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದು ಈ ಸುದ್ದಿಯನ್ನು ಚಂದನ್ ಕುಮಾರ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ತಿಳಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .

ಕವಿತಾ ಗೌಡ ಆಸ್ಪತ್ರೆಗೆ ತೆರಳುತ್ತಿದ್ದಂತೆ ಪೋಸ್ಟ್ ಮಾಡಿದ್ದ ಚಂದನ್ ಇದೀಗ ನಮ್ಮ ಮುದ್ದು ಕಂದಮ್ಮ ಧರೆಗಿಳಿದಿದ್ದಾನೆ ಅನ್ನೋ ಮೂಲಕ ಮಗನ ಮೊದಲ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಮಗನ ಪುಟ್ಟ ಕಾಲುಗಳನ್ನು ತಮ್ಮ ಕೈಯಲ್ಲಿ ಹಿಡಿದು ವಿಡಿಯೋ ಮಾಡಿರುವ ಚಂದನ್ ಅದನ್ನು ಹಂಚಿಕೊಂಡಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯ ಮೂಲಕ ಖ್ಯಾತಿ ಘಳಿಸಿದ್ದ ಕವಿತಾ ಹಾಗೂ ಚಂದನ್ ಬಳಿಕ ಪ್ರೀತಿಸಿ ಲಾಕ್ ಡೌನ್ ಸಮಯದಲ್ಲಿ ಮದುವೆಯಾಗಿದ್ದರು. ಕೆಲ ತಿಂಗಳ ಹಿಂದಷ್ಟೆ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ವಿಷಯ ಹಂಚಿಕೊಂಡಿದ್ದು, ಕೆಲ ದಿನಗಳ ಹಿಂದೆ ಕವಿತಾ ಗೌಡ ಅವರಿಗೆ ಅದ್ಧೂರಿಯಾಗಿ ಸೀಮಂತ ಶಾಸ್ತ್ರ ಮಾಡಲಾಗಿತ್ತು. ಇದೀಗ ಮೊದಲ ಮಗುವನ್ನು ಜೋಡಿ ಬರಮಾಡಿಕೊಂಡಿದ್ದಾರೆ.

Leave a Comment

Your email address will not be published. Required fields are marked *