ಕಾರ್ಕಳ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ, ಹಿಂದೂ ವಿದ್ಯಾರ್ಥಿಗಳ ಪೋಷಕರಿಂದ ಆಕ್ರೋಶ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾಗಿದೆ.

. Ad Widget . Ad Widget

ಸಚ್ಚರಿಪೇಟೆಯ ಲಯನ್ಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಈದ್ ಮಿಲಾದ್ ಆಚರಿಸಲಾಗಿತ್ತು. ಬಿಜೆಪಿ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬೆನ್ನಲ್ಲೇ ಹಿಂದೂ ಶಾಲೆಯ ಮಕ್ಕಳ ಪೋಷಕರಿಂದ ಕಾರ್ಯಕ್ರಮದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

. Ad Widget . . Ad Widget . Ad Widget

ಈ ಬಗ್ಗೆ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇನು ಅರಬ್ಸ್ತಾನ ಅಂದುಕೊಂಡಿದ್ದಾರೆಯೋ? ಶಾಲೆಗಳಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದು ಖಂಡನೀಯ. ಈದ್ ಮಿಲಾದ್ ಆಚರಣೆ ಮಾಡಿದ್ದಲ್ಲದೆ, ಅರಬ್ ರಾಷ್ಟ್ರದ ಉಡುಪು ಧರಿಸಿ ಕುಣಿದಿದ್ದಾರೆ. ಹಿಂದೂ ಮಕ್ಕಳ ಮೇಲೆ ಪ್ರಭಾವ ಬೀರುವಂತೆ ಮಾಡಿದ್ದಾರೆ. ಕೂಡಲೇ ಉಡುಪಿ ಡಿಡಿಪಿಐ ಮಧ್ಯಪ್ರವೇಶಿಸಬೇಕು. ಶಾಲೆಯನ್ನು ಸೀಜ್ ಮಾಡಿ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

Leave a Comment

Your email address will not be published. Required fields are marked *