Ad Widget .

ಶಾಸಕ ಮುನಿರತ್ನಗೆ ಮತ್ತೊಂದು ಟೆನ್ಷನ್: ಅತ್ಯಾಚಾರ ಆರೋಪದಡಿ ಎಫ್ಐಆರ್ ದಾಖಲು

ಸಮಗ್ರ ನ್ಯೂಸ್: ಜೀವ ಬೆದರಿಕೆ ಮತ್ತು ಜಾತಿನಿಂದನೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.ಕಾಂಗ್ರೆಸ್‌ಗೆ ಈ ಪ್ರಕರಣ ಅಸ್ತ್ರವಾಗಿ ಸಿಕ್ಕಿದೆ. ಅಂದರಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ನಡುವೆ ಮುನಿರತ್ನಗೆ ಮತ್ತೊಂದು ಕಂಟಕ ಎದುರಾಗಿದೆ. ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ಮೂಲದ ಮಹಿಳೆಯೊಬ್ರು ಮುನಿರತ್ನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.

Ad Widget . Ad Widget .

ಇದೀಗ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದಡಿ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಡಿವೈಎಸ್‌ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಹಾಜರಾಗಿ ಸಂತ್ರಸ್ತೆ 2 ಗಂಟೆಗೂ ಹೆಚ್ಚು ಕಾಲ ವಿವರಣೆ ನೀಡಿದ್ದಾರೆ. ಇಂದು ಸಂತ್ರಸ್ತೆ ಜೊತೆ ಪೊಲೀಸರು ಸ್ಥಳಮಹಜರು ನಡೆಸಲಿದ್ದಾರೆ. ಘಟನೆ ಸಂಬಂಧ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ FIR ದಾಖಲಾಗಿದೆ. ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್ ಕುಮಾರ್, ಕಿರಣ್, ಲೋಹಿತ್, ಮಂಜುನಾಥ್, ಲೋಕಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

Ad Widget . Ad Widget .

ಖಾಸಗಿ ರೆಸಾರ್ಟ್ನಲ್ಲಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು DySP ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಮಹಿಳೆ ಆರೋಪ ಮಾಡಿ ಹೇಳಿಕೆ ನೀಡಿದ್ದಾರೆ. 354 a, 354 c, 376(2), 308, 406, 384, 120b 504, 506, 149 IPC ಸೆಕ್ಷನ್ ಅಡಿ ಕೇಸ್ ದಾಖಲಾಗಿದೆ. ಆರೋಪಿಗಳ ಪತ್ತೆಗಾಗಿ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ. ಸಂತ್ರಸ್ಥೆ ವೈದ್ಯಕೀಯ ಪರೀಕ್ಷೆಯು ಮುಕ್ತಾಯಗೊಂಡಿದೆ.

Leave a Comment

Your email address will not be published. Required fields are marked *