ಲೈಂಗಿಕ ಕಿರುಕುಳ ಕೇಸ್ ಆರೋಪದಲ್ಲಿ ಕೊರಿಯೋಗ್ರಫರ್ ಜಾನಿ ಮಾಸ್ಟರ್‌ ಅರೆಸ್ಟ್

ಸಮಗ್ರ ನ್ಯೂಸ್: ಲೈಂಗಿಕ ಕಿರುಕುಳ ಕೇಸ್ ಆರೋಪಿ ತಮಿಳು ಚಿತ್ರರಂಗದಲ್ಲಿ ಹೆಸರುವಾಸಿಯಾದ ಜಾನಿ ಮಾಸ್ಟರ್‌ ಬಂಧನವಾಗಿದೆ. ಸಹ ಕೊರಿಯೋಗ್ರಾಫರ್‌ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಜಾನಿ ಮಾಸ್ಟರ್‌ನನ್ನು ಬೆಂಗಳೂರಿನಲ್ಲಿ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

Ad Widget ... ..

ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅವರ ಜೊತೆ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು ರಾಯದುರ್ಗ ಪೊಲೀಸ್‌ ಸ್ಟೇಷನ್‌ನಲ್ಲಿ ದೂರು ದಾಖಲಿಸಿದ್ದಾರೆ. ಆತ ತನ್ನ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದರು. ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಈಗ ಜಾನಿ ಮಾಸ್ಟರ್‌ ಅರೆಸ್ಟ್‌ ಮಾಡಿದ್ದಾರೆ.

Ad Widget

ಮಹಿಳೆ ದೂರು ನೀಡಿದ ಬಳಿಕ ತಲೆ ಮರೆಸಿಕೊಂಡಿದ್ದ ಜಾನಿ ಮಾಸ್ಟರ್ ಹೈದರಾಬಾದ್‌ನಲ್ಲಿರುವ ತನ್ನ ಸ್ನೇಹಿತನ ಮನೆಯಲ್ಲಿದ್ದಾನೆಂಬ ಸೂಕ್ತ ಮಾಹಿತಿ ಮೇರೆಗೆ ಪೊಲೀಸರು ಹುಡುಕಾಟ ನಡೆಸಿದ್ದರು. ಒಟ್ಟು ನಾಲ್ಕು ತಂಡಗಳು ಜಾನಿ ಮಾಸ್ಟರ್‌ಗಾಗಿ ಹುಡುಕಾಟ ನಡೆಸಿದ್ದರು. ಈ ಹಿಂದೆ ಇಂತಹದೇ ಆರೋಪದ ಮೇಲೆ ಆರು ತಿಂಗಳು ಜೈಲಿನಲ್ಲಿದ್ದರು.

Leave a Comment

Your email address will not be published. Required fields are marked *