ಸಮಗ್ರ ನ್ಯೂಸ್:ಪರಂಗಿ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಅಜೀರ್ಣತೆ ಸಮಸ್ಯೆ ದೂರವಾಗುತ್ತದೆ. ವಿಟಮಿನ್ ಸಿ ಇರುವುದರಿಂದ ಇದು ನಮ್ಮ ದೇಹದ ರೋಗ ನಿರೋಧಕ ಶಕ್ತಿಗೆ ಸಾಕಷ್ಟು ಅನುಕೂಲ ಮಾಡಿಕೊಡುತ್ತದೆ. ಇದರಲ್ಲಿ ಸೋಂಕು ಮತ್ತು ಆರೋಗ್ಯದ ಅಸ್ವಸ್ಥತೆಗಳನ್ನು ದೂರ ಮಾಡುವ ಗುಣವಿದೆ.
ತನ್ನಲ್ಲಿ ಕಡಿಮೆ ಸಕ್ಕರೆ ಪ್ರಮಾಣವನ್ನು ಹೊಂದಿದ್ದು ಅಧಿಕ ನಾರಿನಾಂಶವನ್ನು ಹೊಂದಿದೆ. ಸಕ್ಕರೆ ಕಾಯಿಲೆ ಇರುವವರಿಗೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಉತ್ತಮವಾಗಿ ನಿರ್ವಹಣೆಯಾಗುತ್ತದೆ. ಇಡೀ ದಿನ ಬ್ಲಡ್ ಶುಗರ್ ಲೆವೆಲ್ ಒಂದೇ ರೀತಿ ಇರುವಂತೆ ನೋಡಿ ಕೊಳ್ಳುತ್ತದೆ.
ದೇಹದ ಉರಿಯುತ ಸಮಸ್ಯೆಯನ್ನು ಇದು ನಿವಾರಣೆ ಮಾಡುತ್ತದೆ.ವಿಟಮಿನ್ ಎ ಹೆಚ್ಚಾಗಿರುವುದರಿಂದ ಆರೋಗ್ಯಕರವಾದ ಮತ್ತು ಸೌಂದರ್ಯದಿಂದ ಕೂಡಿದ ತ್ವಚೆಯನ್ನು ಹೊಂದಲು ಇದು ಸಹಾಯಮಾಡುತ್ತದೆ.ಮೊಡವೆಗಳು, ಸಣ್ಣ ಸಣ್ಣ ಗುಳ್ಳೆಗಳು, ಚರ್ಮದ ವಯಸ್ಸಾಗವಿಕೆ ಪ್ರಕ್ರಿಯೆ ಹೀಗೆ ಅನೇಕ ಸಮಸ್ಯೆಗಳು ನಿವಾರಣೆಯಾಗುತ್ತವೆ.ಇದಕ್ಕೆ ಕಾರಣ ಪಪ್ಪಾಯ ಹಣ್ಣಿನಲ್ಲಿ ಕ್ಯಾಲೋರಿಗಳು ಕಡಿಮೆ ಇರುವುದು.
ಹೀಗಾಗಿ ಇದು ಖಾಲಿ ಹೊಟ್ಟೆಯಲ್ಲಿ ನಿಮ್ಮ ದೇಹ ಸೇರಿದರೆ ನಿಮ್ಮ ಹೊಟ್ಟೆ ಹಸಿವು ನಿಯಂತ್ರಣವಾಗುತ್ತದೆ ಮತ್ತು ನಿಮಗೆ ಇಡೀ ದಿನ ಹೊಟ್ಟೆ ತುಂಬಿದ ಅನುಭವ ಉಂಟಾಗುತ್ತದೆ. ಪ್ರೋಟಿನ್ ಮತ್ತು ಇನ್ನಿತರ ಪೌಷ್ಟಿಕಾಂಶಗಳು ನಿಮ್ಮ ಆಹಾರ ಪದ್ಧತಿಯಲ್ಲಿ ಸಮತೋಲನವಾಗಿರುವಂತೆ ನೋಡಿಕೊಳ್ಳಿ.