ದಕ್ಷಿಣ ಕನ್ನಡದಲ್ಲಿ ಕಾಲರಾ ಸೊಂಕು ಪತ್ತೆ| ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲ್ಲೂಕಿನ ಗ್ರಾಮವೊಂದರಲ್ಲಿ ಕಾಲರಾ ಸೋಂಕು ಪತ್ತೆಯಾಗಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ಹೀಗಾಗಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Ad Widget ... ..

ಉಡುಪಿ ಜಿಲ್ಲೆಯ ಹೋಸ್ಮಾರು ಬಳಿಯ ಹೋಟೆಲ್ ಒಂದರಲ್ಲಿ ಸಾಮೂಹಿಕವಾಗಿ ಕಾಲರಾ ಹರಡಿರುವಂತ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಇಂದು ಡಿಹೆಚ್ ಓ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹೋಟೆಲ್ ಮಾಲೀಕರ ಜೊತೆಗೆ ಸಭೆ ನಡೆಸಿದರು.

Ad Widget

ಇಂದಿನ ಹೋಟೆಲ್ ಮಾಲೀಕರ ಸಭೆಯಲ್ಲಿ ಆಹಾರ ಗುಣಮಟ್ಟದ ಬಗ್ಗೆ ಎಚ್ಚರಿಕೆ ವಹಿಸಿ. ಸ್ವಚ್ಛತೆಯ ಕಡೆಗೆ ಗಮನ ನೀಡುವಂತೆ ಜಿಲ್ಲಾ ಆರೋಗ್ಯಾಧಿಕಾರಿ ತಿಮ್ಮಯ್ಯ ಮನವಿ ಮಾಡಿದರು.

Leave a Comment

Your email address will not be published. Required fields are marked *