Ad Widget .

ಟಿವಿ ನೋಡುತ್ತಿದ್ದ ವೇಳೆ ಹೃದಯಾಘಾತ| 8ನೇ ತರಗತಿ ವಿದ್ಯಾರ್ಥಿ ಸಾವು

ಸಮಗ್ರ ವಾರ್ತೆ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ಮನೆಯಲ್ಲಿ TV ನೋಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕನನ್ನು ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದ ಸಚಿನ್ ಎಂದು ತಿಳಿದುಬಂದಿದೆ.

Ad Widget . Ad Widget .

ಈತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ. ನಿನ್ನೆ ಇದ್ದಕ್ಕಿದ್ದಂತೆ ಸಚಿನ್‌ಗೆ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ ಶಾಲೆಗೆ ಹೋಗದೆ ಮನೆಯಲ್ಲಿ ಟಿವಿ ನೋಡುತ್ತಿದ್ದ. ಈ ವೇಳೆ ಏಕಾಏಕಿ ಸಚಿನ್‌ಗೆ ಎದೆನೋವು ಕಾಣಿಸಿಕೊಂಡು, ಕುಳಿತಲ್ಲಿಯೇ ಕೊನೆಯುಸಿರೆಳೆದಿದ್ದೇನೆ.

Ad Widget . Ad Widget .

ಮಲಗಿದ್ದ ಮಗನನ್ನು ಮಾತನಾಡಿಸಲು ತಾಯಿ ಕಾವ್ಯಶ್ರೀ ಮುಂದಾದಾಗ ಮಗ ಮಾತನಾಡಿಲ್ಲ. ಎಚ್ಚರವೂ ಆಗಿಲ್ಲ. ಇದರಿಂದ ಗಾಬರಿಗೊಂಡ ಪೋಷಕರು ತಕ್ಷಣವೇ ಆಲೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಬಾಲಕ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

Leave a Comment

Your email address will not be published. Required fields are marked *