ಸಮಗ್ರ ನ್ಯೂಸ್:ಮೆಸ್ಕಾಂ ಇಲಾಖೆಯಲ್ಲಿ ಖಾಲಿ ಇರುವ ಪವರ್‌ಮ್ಯಾನ್ (ಲೈನ್ ಮ್ಯಾನ್) ಹುದ್ದೆಯನ್ನು ಭರ್ತಿಗೊಳಿಸಲು ಸರಕಾರ ಏಕಕಾಲದಲ್ಲಿ ಸಂದರ್ಶನ ನಡೆಸಲಾಯಿತು.ಸ್ಥಳೀಯರಿಗೆ ಆಧ್ಯತೆಯನ್ನು ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಇಂಧನ ಸಚಿವ ಕೆ ಜೆ ಜಾರ್ಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಶುಕ್ರವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ಪವರ್‌ಮ್ಯಾನ್ ನೇಮಕಾತಿ ವಿಚಾರದಲ್ಲಿ ಸಚಿವರ ಜೊತೆ ಸುದೀರ್ಘ ಚರ್ಚೆ ನಡೆಸಿದರು.ಪುತ್ತೂರಿನಲ್ಲಿ ಪವರ್ ಮ್ಯಾನ್‌ಗಳ ಕೊರತೆ ಇದೆ. ಮಳೆಗಾಲದಲ್ಲಿ ಇದು ಗಂಭೀರ ಸಮಸ್ಯೆಯಾಗಿ ಪರಿಣಮಿಸುತ್ತಿದೆ.ಆಯಾ ಜಿಲ್ಲೆಯ ಆಕಾಂಕ್ಷಿಗಳು ಆಯಾ ಜಿಲ್ಲೆಯಲ್ಲಿ ಸಂದರ್ಶನಕ್ಕೆ ಹಾಜರಾಗುವುದು ಮತ್ತು ಸ್ಥಳೀಯರಿಗೆ ಉದ್ಯೋಗ ದೊರೆಯುವಂತಾಗಬೇಕು.
ಬೇರೆ ಬೇರೆ ಜಿಲ್ಲೆಗಳಿಂದ ಸಂದರ್ಶನಕ್ಕೆ ಬಂದವರು ಕರಾವಳಿ ಭಾಗದಲ್ಲಿ ಒಂದೆರಡು ವರ್ಷ ಸೇವೆ ಸಲ್ಲಿಸಿ ಆ ಬಳಿಕ ವರ್ಗಾವಣೆ ಪಡೆದು ತಮ್ಮ ಜಿಲ್ಲೆಗಳಿಗೆ ತೆರಳುತ್ತಾರೆ.ಈ ಕಾರಣಕ್ಕೆ ಪವರ್ ಮ್ಯಾನ್‌ಗಳ ಸಮಸ್ಯೆ ಉಂಟಾಗುತ್ತದೆ ಎಂದು ಸಚಿವರಲ್ಲಿ ತಿಳಿಸಿದರು.ವಿದ್ಯುತ್ ಕಂಬ ಹತ್ತುವ ತರಬೇತಿಯನ್ನು ಪುತ್ತೂರು ಶಾಸಕರು ತಮ್ಮ ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಆಯೋಜನೆ ಮಾಡಿ ಪವರ್‌ಮ್ಯಾನ್ ಗಳ ಆಯ್ಕೆ ಆಗಲಿದೆ.
ಸುಮಾರು ೪೦೦ಕ್ಕೂ ಹೆಚ್ಚು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ತರಬೇತಿ ನಡೆಯಲಿದೆ.ತರಬೇತಿಯಲ್ಲಿ ಆಯ್ಕೆಯಾದ ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅರ್ಹತೆಯನ್ನು ಪಡೆಯಲಿದ್ದಾರೆ. ಈ ನಿಟ್ಟಿನಲ್ಲಿ ಇಂಧನ ಸಚಿವರ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ ನಡೆಸಿದರು.