ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಬೈಂದೂರು ಠಾಣಾ ವ್ಯಾಪ್ತಿಯ ಬಾಲಕನೊಬ್ಬ ಸ್ಥಳೀಯ
ಮಸೀದಿಗೆ ನಮಾಜ್‌ಗೆ ತೆರಳಿದ ಸಂದರ್ಭದಲ್ಲಿ ಆತನಿಗೆ ಲೈಂಗಿಕ ಕಿರುಕುಳ ನೀಡುವ
ಉದ್ದೇಶದಿಂದ ಆತನಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವರದಿಯಾಗಿದ್ದ ಪ್ರಕರಣ ಸುಳ್ಳು ಎಂದು ಪೊಲೀಸರು ಬಿ ರಿಪೋರ್ಟ್ ನೀಡಿದ್ದು, ಸದ್ರಿ ಪ್ರಕರಣಕ್ಕೆ ಜಿಲ್ಲಾ ಪೋಕ್ಸೊ ನ್ಯಾಯಾಲಯ ಮರುಜೀವ ನೀಡಿದೆ.
ಪ್ರಕರಣದಲ್ಲಿ ಆರೋಪಿಯಾದ ಫೈಜಲ್ ಬ್ಯಾರಿ
ಮತ್ತು ಆ ಬಗ್ಗೆ ಬೇರೆಯವರಿಗೆ ವಿಷಯ ತಿಳಿಸದಂತೆ ಕೊಲೆ ಬೆದರಿಕೆ ಹಾಕಿರುವ ಆರೋಪಿಗಳಾದ
ಆಖಿಲಾ ಮತ್ತು ಮೊಹಾಜಮ್‌ರವರ ಮೇಲೆ ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ದೂರು
ದಾಖಲಾಗಿದ್ದು, ಅದರಂತೆ ಪ್ರಕರಣದ ಅಕ್ರ ಸಂಖ್ಯೆ ೮೫/೨೦೨೨ರಂತೆ ದೂರು ದಾಖಲಿಸಿದ ಪೊಲೀಸರು ವಿಚಾರಣೆ ನಡೆಸಿದ್ದರು.
ಬಳಿಕ ಇದೊಂದು ಸುಳ್ಳು ಪ್ರಕರಣವೆಂದು
ಉಡುಪಿಯ ಜಿಲ್ಲಾ ಪೋಕ್ಸೋ ನ್ಯಾಯಾಲಯಕ್ಕೆ ‘ಬಿ’ ಅಂತಿಮ ವರದಿಯನ್ನು ಸಲ್ಲಿಸಿರುತ್ತಾರೆ.
ಸದ್ರಿ ವರದಿಯ ಆಧಾರದ ಮೇಲೆ ಪೊಲೀಸರ ‘ಬಿ’ ವರದಿಯನ್ನು ಪ್ರಶ್ನಿಸಿ ನೊಂದ ಬಾಲಕ
ನ್ಯಾಯಾಲಯಕ್ಕೆ ಹಾಜರಾಗಿ ವೈದ್ಯರು, ಇತರ ಸಾಕ್ಷಿಗಳನ್ನು ತನ್ನ ಪರವಾಗಿ ನ್ಯಾಯಾಲಯದ
ಮುಂದೆ ವಿಚಾರಣೆಗೆ ಹಾಜರುಪಡಿಸಿದ್ದು, ಸುದೀರ್ಘ ವಿಚಾರಣೆ ನಡೆಸಿದ
ನ್ಯಾಯಾಧೀಶರು ಮೇಲ್ನೊಟಕ್ಕೆ ಪ್ರಕರಣ ನಡೆದಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಪೊಲೀಸರ
‘ಬಿ’ ವರದಿಯನ್ನು ತಿರಸ್ಕರಿಸಿ ಆರೋಪಿಗಳಿಗೆ ನ್ಯಾಯಾಲಯಕ್ಕೆ ಹಾಜರುವಾಗುವಂತೆ ಸಮನ್ಸ್
ನೀಡಲಾಗಿದೆ.
ಆರೋಪಿಗಳ ಮೇಲೆ ಮರು ಪ್ರಕರಣ ದಾಖಲಿಸುವಂತೆ ಉಡುಪಿ ಜಿಲ್ಲಾ ಪೋಕ್ಸೋ
ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣರವರು ಆದೇಶ ಮಾಡಿರುತ್ತಾರೆ. ಈ
ಪ್ರಕರಣದಲ್ಲಿ ನೊಂದ ಬಾಲಕನ ಪರವಾಗಿ ಉಡುಪಿಯ ನ್ಯಾಯವಾದಿ ಚೇರ್ಕಾಡಿ ಅಖಿಲ್ ಹೆಗ್ಡೆ ವಾದಿಸಿದ್ದರು.