Ad Widget .

ಬಾಲಕಿಯನ್ನು ಅತ್ಯಾಚಾರದಿಂದ ರಕ್ಷಿಸಿದ ಕೋತಿಗಳು| ಆರೋಪಿಯ ಮೇಲೆ ದಾಳಿ ನಡೆಸಿದ ಆಂಜನೇಯ!!

ಸಮಗ್ರ ನ್ಯೂಸ್: ದೇವರಂತೆ ಬಂದ ಕೋತಿಗಳು ಬಾಲಕಿ ಮೇಲೆ ನಡೆಯುತ್ತಿದ್ದ ಅತ್ಯಾಚಾರ ಯತ್ನವನ್ನು ತಪ್ಪಿಸಿರುವ ಘಟನೆ ಉತ್ತರ ಪ್ರದೇಶದ ಬಾಗ್​ಪತ್​ನಲ್ಲಿ ನಡೆದಿದೆ. 6 ವರ್ಷದ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಕೋತಿಗಳ ಗುಂಪೊಂದು ಆ ವ್ಯಕ್ತಿಯ ಮೇಲೆ ದಾಳಿ ನಡೆಸಿವೆ.

Ad Widget . Ad Widget .

ಯುಕೆಜಿ ವಿದ್ಯಾರ್ಥಿನಿ ಅಲ್ಲಿಂದ ತಪ್ಪಿಸಿಕೊಂಡು ಮನೆಗೆ ಓಡಿ ಹೋಗಿ ಪೋಷಕರಿಗೆ ಈ ವಿಚಾರವನ್ನು ವಿವರಿಸಿದ್ದಾಳೆ. ಕೋತಿಗಳು ತನ್ನ ಪ್ರಾಣವನ್ನು ಉಳಿಸಿರುವುದಾಗಿ ಹೇಳಿದ್ದಾಳೆ. ಸೆಪ್ಟೆಂಬರ್ 20ರಂದು ಬಾಗ್​ಪತ್​ನ ದೌಲಾ ಗ್ರಾಮದಲ್ಲಿ ಘಟನೆ ನಡೆದಿದೆ, ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್​​ಗಳಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪರಾರಿಯಾಗಿದ್ದ ಆತನನ್ನು ಪೊಲೀಸರು ಹುಡುಕುತ್ತಿದ್ದಾರೆ.

Ad Widget . Ad Widget .

ಪೊಲೀಸರ ಪ್ರಕಾರ ಆರೋಪಿ ಬಾಲಕಿಯನ್ನು ಅಪಹರಿಸಿ, ಒಂದೆಡೆ ಕರೆದೊಯ್ದು ಆಕೆಯನ್ನು ವಿವಸ್ತ್ರಗೊಳಿಸಿ ಲೈಂಗಿಕ ದೌರ್ಜನ್ಯಕ್ಕೆ ಪ್ರಯತ್ನಿಸಿದ್ದರು. ಇದ್ದಕ್ಕಿದ್ದಂತೆ ಕೋತಿಗಳು ಸ್ಥಳಕ್ಕೆ ಬಂದಿದ್ದವು, ಆ ಕೋತಿಗಳನ್ನು ನೋಡಿ ಆರೋಪಿ ಪರಾರಿಯಾಗಿದ್ದಾನೆ.

ಗ್ರಾಮದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಆರೋಪಿ ಬಾಲಕಿಯನ್ನು ಕರೆದುಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ದೃಶ್ಯಾವಳಿಗಳಿಂದ ಆರೋಪಿ ಪತ್ತೆಗೆ ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *