Ad Widget .

ರೇಣುಕಾಸ್ವಾಮಿ ಕೊಲೆ‌ ಪ್ರಕರಣ| A16 ಆರೋಪಿ ಕೇಶವ ಸ್ವಾಮಿಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲು ಪಾಲಾಗಿದೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಎ.16 ಆರೋಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

Ad Widget . Ad Widget .

ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಎ.16 ಆರೋಪಿಯಾಗಿರುವಂತ ಕೇಶವಮೂರ್ತಿ ಎಂಬುವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ರೇಣುಕಾಸ್ವಾಮಿ ಮರ್ಡರ್ ಕೇಸಲ್ಲಿ ಆರೋಪಿಯಾಗಿರುವ ಕೇಶವ ಮೂರ್ತಿಗೆ ಜಾಮೀನು ಮಂಜೂರು ಮಾಡಲಾಗಿದೆ.

Ad Widget . Ad Widget .

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ.16 ಆರೋಪಿಯಾಗಿರುವ ಕೇಶವಮೂರ್ತಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿಲ್ಲ. ಬದಲಾಗಿ ಸಾಕ್ಷ್ಯನಾಶದ ಪ್ರಕರಣ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಇನ್ನೂ ಇದೇ ಪ್ರಕರಣದಲ್ಲಿ ಎ.1 ಆರೋಪಿಯಾಗಿರುವ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 57ನೇ ಸಿಸಿಹೆಚ್ ಕೋರ್ಟ್ ಸೆ.27ಕ್ಕೆ ಮುಂದೂಡಿದೆ.

Leave a Comment

Your email address will not be published. Required fields are marked *