Ad Widget .

KSRTC ಮಂಗಳೂರು ವಿಭಾಗದಿಂದ ‘ದಸರಾ ದರ್ಶಿನಿ’ ವಿಶೇಷ ಪ್ಯಾಕೇಜ್| ಇಲ್ಲಿದೆ ಸಂಪೂರ್ಣ ವಿವರ…

ಸಮಗ್ರ ನ್ಯೂಸ್: ಕೆ.ಎಸ್.ಅರ್.ಟಿ.ಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ.

Ad Widget . Ad Widget .

ಪ್ಯಾಕೇಜ್ ಪ್ರವಾಸದ ಮಾರ್ಗ, ವೇಳೆ ಮತ್ತು ಪ್ರಯಾಣ ದರದ ವಿವರ ಇಂತಿದೆ…

Ad Widget . Ad Widget .

ಮಂಗಳೂರು ದಸರಾ ನವದುರ್ಗ ದರ್ಶನ ಪ್ಯಾಕೇಜ್ :
ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್ಗೆ 8ಗಂಟೆಗೆ ಹೊರಟು, ಶ್ರೀ ಮಂಗಳಾದೇವಿ ದೇವಸ್ಥಾನ – ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ – ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ – ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ – (ಮಧ್ಯಾಹ್ನದ ಊಟ) – ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಹಾಗೂ ಬೀಚ್ – ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ – ಶ್ರೀ ಉರ್ವ ಮಾರಿಯಮ್ಮ ದೇವಸ್ಥಾನ (ಸಂಜೆ ಉಪಹಾರ) – ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ, ನವದುರ್ಗಾ ದರ್ಶನ ರಾತ್ರಿ 8ಗಂಟೆಗೆ ಮಂಗಳೂರು ಬಸ್ಸ್ ನಿಲ್ದಾಣಕ್ಕೆ ಹಿಂದಿರುಗಲಾಗುತ್ತದೆ. – ಒಟ್ಟು ಪ್ರಯಾಣದರ (ಊಟ, ಉಪಹಾರ ಹೊರತುಪಡಿಸಿ) ವಯಸ್ಕರಿಗೆ ರೂ.400/- ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) ರೂ.300/- ಪ್ರಯಾಣ ದರ ನಿಗದಿಪಡಿಸಲಾಗಿದೆ.

ಮಡಿಕೇರಿ ಪ್ಯಾಕೇಜ್ ಪ್ರವಾಸ :
ಮಂಗಳೂರಿನಿಂದ ಬೆಳಿಗ್ಗೆ 7ಗಂಟೆಗೆ ಹೊರಟು – ಮಡಿಕೇರಿ- ರಾಜಾಸೀಟ್-ಅಬ್ಬಿಫಾಲ್ಸ್-ನಿಸರ್ಗಧಾಮ- ಗೋಲ್ಡನ್ ಟೆಂಪಲ್ ಪ್ರವಾಸ ಕೈಗೊಂಡು ರಾತ್ರಿ 9ಗಂಟೆಗೆ ಮಂಗಳೂರು ಬಸ್ಸ್‍ನಿಲ್ದಾಣಕ್ಕೆ ಹಿಂದಿರುಗಲಾಗುತ್ತದೆ. (ಊಟ, ಉಪಹಾರ ಹೊರತುಪಡಿಸಿ) ವಯಸ್ಕರಿಗೆ ರೂ.500/- ಮಕ್ಕಳಿಗೆ (6ವರ್ಷದಿಂದ 12 ವರ್ಷದವರಿಗೆ) ರೂ.400/- ನಿಗದಿಪಡಿಸಲಾಗಿದೆ.

ಮಂಗಳೂರು-ಕೊಲ್ಲೂರು ಪ್ಯಾಕೇಜ್ ಪ್ರವಾಸ :
ಮಂಗಳೂರು ಬಸ್ ನಿಲ್ದಾಣದಿಂದ ಬೆಳಿಗ್ಗೆ 8 ಗಂಟೆಗೆ ಹೊರಟು – ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ – ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ) – ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ – ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಪ್ರವಾಸ ಕೈಗೊಂಡು ರಾತ್ರಿ 7ಗಂಟೆಗೆ ಮಂಗಳೂರು ಬಸ್ಸ್ ನಿಲ್ದಾಣಕ್ಕೆ ಹಿಂದಿರುಗಲಾಗುತ್ತದೆ. (ಊಟ, ಉಪಹಾರ ಹೊರತುಪಡಿಸಿ) ವಯಸ್ಕರಿಗೆ ರೂ.500/- ಮಕ್ಕಳಿಗೆ (6ವರ್ಷದಿಂದ 12 ವರ್ಷದವರಿಗೆ) ರೂ.400/- ದರ ನಿಗದಿಪಡಿಸಲಾಗಿದೆ.

ಮಂಗಳೂರು-ಮುರುಡೇಶ್ವರ ಟೂರ್ ಪ್ಯಾಕೇಜ್
ಮಂಗಳೂರು ಬಸ್‍ನಿಲ್ದಾಣ ದಿಂದ ಬೆಳಿಗ್ಗೆ 7ಗಂಟೆಗೆ ಹೊರಟು – ಮುರುಡೇಶ್ವರ ದೇವಸ್ಥಾನ – ಚಂಡಿಕಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕುಂಭಾಶಿ – ಆನೆಗುಡ್ಡೆ ಗಣಪತಿ ದೇವಸ್ಥಾನ ಕುಂಭಾಶಿ – ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಪ್ರವಾಸ ಕೈಗೊಂಡು ರಾತ್ರಿ 7ಗಂಟೆಗೆ ಮಂಗಳೂರು ಬಸ್ಸ್ ನಿಲ್ದಾಣಕ್ಕೆ ಹಿಂದಿರುಗಲಾಗುತ್ತದೆ. (ಊಟ, ಉಪಹಾರ ಹೊರತುಪಡಿಸಿ) ವಯಸ್ಕರಿಗೆ ರೂ.550/- ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) ರೂ.450/- ದರ ನಿಗದಿಪಡಿಸಲಾಗಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸದರಿ ಸಾರಿಗಳಿಗೆ www.ksrtc.in ನಲ್ಲಿ ಮುಂಗಡ ಆಸನ ಕಾಯ್ದಿರಿಸಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 7760990702, 7760990711, ಮಂಗಳೂರು-1ನೇ ಘಟಕ ವ್ಯವಸ್ಥಾಪಕರು, ದೂರವಾಣಿ ಸಂಖ್ಯೆ ; 7760990713, ಮಂಗಳೂರು-3ನೇ ಘಟಕ ವ್ಯವಸ್ಥಾಪಕರು, ದೂರವಾಣಿ ಸಂಖ್ಯೆ – 7760990723, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್, ದೂರವಾಣಿ ಸಂಖ್ಯೆ 9663211553, ಮಂಗಳೂರು ಬಸ್ ನಿಲ್ದಾಣ, ದೂರವಾಣಿ ಸಂಖ್ಯೆ : 7760990720 ಸಂಪರ್ಕಿಸುವಂತೆ ಕೆಎಸ್‍ಆರ್‍ಟಿಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *