Ad Widget .

ಅಮೇರಿಕಾ ಪ್ರವಾಸ ಮುಗಿಸಿ ತಾಯ್ನಾಡಿಗೆ ವಾಪಸಾದ ಪಟ್ಲ ಸತೀಶ್ ಶೆಟ್ಟಿ ಯಕ್ಷತಂಡ

ಸಮಗ್ರ ನ್ಯೂಸ್: ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ತಾಯ್ನಾಡಿಗೆ ಮರಳಿದ್ದು ಬಜ್ಪೆ ವಿಮಾನ ನಿಲ್ದಾಣದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸ್ವಾಗತ ಕೋರಿದರು.

Ad Widget . Ad Widget .

ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ 9 ಮಂದಿಯ ತಂಡ ಅಮೇರಿಕ ದೇಶದ ಬೇರೆ ಬೇರೆ ತಾಣಗಳಲ್ಲಿ ಯಕ್ಷಗಾನ ಪ್ರದರ್ಶಿಸಿ 75 ದಿನಗಳ ಬಳಿಕ ತಾಯ್ನಾಡಿಗೆ ಮರಳಿದೆ.

Ad Widget . Ad Widget .

ಈ ವೇಳೆ ತಮ್ಮ ಅಮೇರಿಕ ಪ್ರವಾಸದ ಕಥನವನ್ನು ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಂಚಿಕೊಂಡ ಅವರು, “ವಿದೇಶಗಳಲ್ಲಿ ತುಳುನಾಡಿನ ಗಂಡುಮೆಟ್ಟಿನ ಕಲೆಯಾಗಿರುವ ಯಕ್ಷಗಾನ ಪ್ರದರ್ಶನ ಮತ್ತು ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು ಹೆಮ್ಮೆ ಅನಿಸುತ್ತಿದೆ. ಅಲ್ಲಿನ ಜನರು ಕೂಡ ಯಕ್ಷಗಾನ ನಾಟ್ಯ ಮತ್ತು ಭಾಗವತಿಕೆಗೆ ಮನಸೋತು ಕಲಿಯಲು ಆಸಕ್ತಿ ತೋರಿಸಿರುವುದು ಖುಷಿಯ ವಿಚಾರ” ಎಂದರು.

“ಅಮೇರಿಕಾದ ಎರಡು ನಗರಗಳಲ್ಲಿ ಪಟ್ಲ ಫೌಂಡೇಶನ್ ದಿನವನ್ನಾಗಿ ಅಲ್ಲಿನ ಮೇಯರ್ ಘೋಷಣೆ ಮಾಡಿದ್ದಾರೆ. ಇದು ಅವಿಸ್ಮರಣೀಯ ಅನುಭವ. ನಮ್ಮ ಕಲೆಗೆ ಇಂದು ವಿಶ್ವವ್ಯಾಪಿ ಮನ್ನಣೆ ಸಿಗುತ್ತಿದೆ. ಪಟ್ಲ ಫೌಂಡೇಷನ್ ಟ್ರಸ್ಟ್ ಅಮೇರಿಕಾ ಘಟಕದ ಅಧ್ಯಕ್ಷ ಡಾ.ಅರವಿಂದ ಉಪಾಧ್ಯಾಯ, ಡಾ. ಶ್ರೀಧರ ಆಳ್ವ, ಮಹಾಬಲ ಶೆಟ್ಟಿ, ಉಳಿ ಯೋಗೇಂದ್ರ ಭಟ್ ಮತ್ತಿತರ ಪ್ರಮುಖರು ಅಮೆರಿಕದ 20 ರಾಜ್ಯಗಳಲ್ಲಿ ಯಕ್ಷಗಾನ ಪ್ರದರ್ಶನ ಆಯೋಜಿಸಿದ್ದರು ಅವರಿಗೆ ಧನ್ಯವಾದಗಳು” ಎಂದರು.

Leave a Comment

Your email address will not be published. Required fields are marked *