Ad Widget .

ಮುಂಬಯಿಯಲ್ಲಿ ಮಹಾಮಳೆ! ಅನಾಹುತಗಳ ಸರಮಾಲೆ ಸೃಷ್ಟಿಸಿದ ಮಳೆ

ಸಮಗ್ರ ನ್ಯೂಸ್: ಮುಂಬಯಿ ಮಹಾನಗರ ಸೇರಿ ಮಹಾರಾಷ್ಟ್ರದ ವಿವಿಧೆಡೆ ಭಾರಿ ಮಳೆ ಸುರಿದು ಅನಾಹುತಗಳ ಸರಮಾಲೆಯನ್ನು ಸೃಷ್ಟಿಸಿದೆ.

Ad Widget . Ad Widget .

ಮಳೆಗೆ ಮುಂಬಯಿಯಲ್ಲಿ ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ. ಸೆ.18 ರಂದು ಸಂಜೆ ಹೊತ್ತಿಗೆ ಮಳೆ ಶುರುವಾಗಿದ್ದು, ಸತತವಾಗಿ 5 ಗಂಟೆಗಳ ಕಾಲ ಸುರಿದಿದೆ. ಮುಂಬಯಿ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ 200 ಮಿ.ಮೀ ಗಿಂತ ಹೆಚ್ಚು ಮಳೆಯಾಗಿದೆ.

Ad Widget . Ad Widget .

ಭಾರಿ ಮಳೆಯಿಂದಾಗಿ ಮುಂಬಯಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರೈಲು, ರಸ್ತೆ ಸಂಚಾರ ವ್ಯತ್ಯಯಗೊಂಡು ಜನರು ತಡರಾತ್ರಿಯವರೆಗೂ ಬಸ್‌ ನಿಲ್ದಾಣ, ರಸ್ತೆಗಳಲ್ಲಿ ಬಾಕಿಯಾಗಿದ್ದರೂ.45 ವರ್ಷದ ಮಹಿಳೆಯೊಬ್ಬರು ಅಂಧೇರಿ ಪೂರ್ವದ ಚರಂಡಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಕಲ್ಯಾಣ್‌ನಲ್ಲಿ ಕಲ್ಲು ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಖೋಪೋಲಿಯ ಜೆನಿತ್ ಜಲಪಾತದ ಬಳಿ ಮತ್ತೋರ್ವ ಮಹಿಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

Leave a Comment

Your email address will not be published. Required fields are marked *