ಟ್ಯಾಂಕರ್ ಗೆ ಕಾರು ಡಿಕ್ಕಿ ಸ್ಥಳದಲ್ಲೇ ನಾಲ್ವರು ಸಾವು

ಸಮಗ್ರ ನ್ಯೂಸ್: ಟ್ಯಾಂಕರ್ಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರು ಗ್ರಾಮದ ಬಳಿ ರಾತ್ರಿ ನಡೆದಿದೆ.

Ad Widget ... ..

ಅಪಘಾತದಲ್ಲಿ ಲಕ್ಷ್ಮಣ ವಡ್ಡರ್(55), ಬೈಲಪ್ಪ ಬಿರಾದಾರ್(45), ರಾಮಣ್ಣ ನಾಯಕ(50), ಚಾಲಕ ರಫಿಕ್ ಮುಲ್ಲಾ(25) ಎಂಬ ನಾಲ್ವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮೃತರು, ವಿಜಯಪುರ ಜಿಲ್ಲೆ ಬಿದರಕುಂದಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಕಾರು ಮುದ್ದೇಬಿಹಾಳದ ಕಡೆ ಹೊರಟ್ಟಿತ್ತು. ಟ್ಯಾಂಕರ್ ಮುದ್ದೇಬಿಹಾಳದಿಂದ ಹುನಗುಂದ ಕಡೆ ತೆರಳಿತ್ತು. ನಿದ್ದೆ ಮಂಪರಿನಿಂದ ಟ್ಯಾಂಕರ್ ಕಾರು ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹುನಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Ad Widget

Leave a Comment

Your email address will not be published. Required fields are marked *