ಇಲ್ಲಿದೆ ಸಂಪೂರ್ಣ ಮಾಹಿತಿ
ಸಮಗ್ರ ನ್ಯೂಸ್:ಅಧಿಕ ತೂಕದ ಸಮಸ್ಯೆ ಎಲ್ಲರನ್ನೂ ಕಾಡುತ್ತಿದೆ. ಈ ಸಮಸ್ಯೆಯಿಂದ ಬಳಲುತ್ತಿರುವವರು ಕೊತ್ತಂಬರಿ ಸೊಪ್ಪಿನ ರಸವನ್ನು ಸೇವಿಸುವುದರಿಂದ ಸುಲಭವಾಗಿ ತೂಕವನ್ನು ಕಡಿಮೆಮಾಡಬಹುದು,ಮೂಳೆಯ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಮೆಗ್ನಿಸಿಯಮ್ನಲ್ಲಿ ಸಮೃದ್ಧವಾಗಿದೆ.
ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ.
ಇದನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ,ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಕೊತ್ತಂಬರಿ ಸೊಪ್ಪಿನ ರಸವನ್ನು ಸೇವಿಸುವುದರಿಂದ ಪ್ರಯೋಜನ ಪಡೆಯಬಹುದು ಹಾಗೂ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆ ಸಮಸ್ಯೆ ಇದ್ದಲ್ಲಿ ಹಸಿ ಕೊತ್ತಂಬರಿ ಸೊಪ್ಪಿನ ರಸವನ್ನು ಸೇವಿಸುವುದು ತುಂಬಾ ಒಳ್ಳೆಯದು.
ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ಈ ಕೊತ್ತಂಬರಿ ಸೊಪ್ಪಿನ ರಸವನ್ನು ಸೇವಿಸುವ ಮೂಲಕ ತಮ್ಮ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ಕೊತ್ತಂಬರಿ ಸೊಪ್ಪು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು ಪರಿಣಾಮಕಾರಿ ಎನ್ನುತ್ತಾರೆ ತಜ್ಞರು.