Ad Widget .

ಚಿತ್ರ ಕಲಾವಿದ ‘ವಿಜಯ ‘ ಸಿಂಧೂರ ಇನ್ನಿಲ್ಲ

ಸಮಗ್ರ ನ್ಯೂಸ್: ಅಂತರಾಷ್ಟ್ರೀಯ ಖ್ಯಾತಿಯ ಹಿರಿಯ ಕಲಾವಿದ ವಿಜಯ ಸಿಂಧೂ‌ರ್ ವಿಧಿವಶರಾಗಿದ್ದಾರೆ.ಇವರು ಜಮಖಂಡಿಯ ಸ್ವಗೃಹದಲ್ಲಿ ಮುಂಜಾನೆ ನಿಧನರಾಗಿದ್ದಾರೆ.

Ad Widget . Ad Widget .

ವಿಜಯ ಸಿಂಧೂರ ಅವರು 1940ರ ಜೂನ್ 7ರಂದು ಬಿಜಾಪುರ ಜಿಲ್ಲೆಯ ಬನಹಟ್ಟಿಯಲ್ಲಿ ಜನಿಸಿದರು. ತಂದೆ ಗಂಗಪ್ಪ, ತಾಯಿ ಬಸಮ್ಮ, ಬಾಲ್ಯದಿಂದಲೇ ಅವರು ಚಿತ್ರಕಲೆಯಲ್ಲಿ ಬಹಳ ಆಸಕ್ತ ವಹಿಸಿದ್ದರು. ಇಂಜಿನಿಯರ್ ಅಥವಾ ಡಾಕ್ಟರ್ ಆಗಬೇಕೆಂದು ಅಂದುಕೊಂಡಿದ್ದ ಅವರ ಮನಸ್ಸು ಚಿತ್ರಕಲೆಯತ್ತ ಸೆಳೆಯಿತು.

Ad Widget . Ad Widget .

ಅವರಿಗೆ ಕರ್ನಾಟಕ ಸರ್ಕಾರದ ವರ್ಣಶಿಲ್ಪಿ ವೆಂಕಟಪ್ಪ ಇಂದ್ರ ಲಲಿತ ಕಲಾ ಅಕಾಡೆಮಿ ಪ್ರಶಸ್ತಿ ಬಂದಿವೆ.ಬಾಂಬೆ ಆರ್ಟ್ ಸೊಸೈಟಿ ಪ್ರಶಸ್ತಿ, ಆರ್ಟ್‌ ಸೊಸೈಟಿ ಆಫ್ ಇಂಡಿಯಾದ ಪಟೇಲ್ ಟ್ರೋಫಿ, ಕೇಂದ್ರ ಲಲಿತ ಕಲಾ ಅಕಾಡಮಿ ಪ್ರಶಸ್ತಿ, ಕೋಲ್ಕತ್ತಾದ ಅಖಿಲ ಭಾರತ ಕಲಾ ಪ್ರದರ್ಶನ ಪ್ರಶಸ್ತಿ, ರಾಜ್ಯ ಲಲಿತ ಕಲಾ ಅಕಾಡಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಮುಂತಾದ ಅನೇಕ ಗೌರವಗಳು ಲಭಿಸಿದೆ.

Leave a Comment

Your email address will not be published. Required fields are marked *