September 2024

ಮದ್ಯ ನೀತಿ ಪ್ರಕರಣ/ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್‌: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ ಅವರನ್ನು ಸಿಬಿಐ ಬಂಧಿಸಿತ್ತು. ಕೇಜ್ರಿವಾಲ್‌ ಅವರು ಸಿಬಿಐ ಬಂಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪು ಪ್ರಕಟಿಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್‌, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ […]

ಮದ್ಯ ನೀತಿ ಪ್ರಕರಣ/ ಕೇಜ್ರಿವಾಲ್‌ಗೆ ಜಾಮೀನು ಮಂಜೂರು Read More »

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕಿಂಗ್‌ ನ್ಯೂಸ್‌/ ಪರೀಕ್ಷಾ ಅವಧಿ ೧೫ ನಿಮಿಷ ಕಡಿತ

ಸಮಗ್ರ ನ್ಯೂಸ್‌: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿಗದಿಯಾಗಿದ್ದ ಸಮಯವನ್ನು ಈ ವರ್ಷದಿಂದ ಕಡಿತ ಮಾಡಿಲಾಗಿದ್ದು, ವಿದ್ಯಾರ್ಥಿಗಳಿಗೆ ಶಾಕ್‌ ನೀಡಿದೆ. ಸಮಯ ಕಡಿತ ಮಾಡಿರುವ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದ್ದು, 2024-25ನೇ ಸಾಲಿನ ಪರೀಕ್ಷೆಯಿಂದಲೇ ಜಾರಿ ಆಗಲಿದೆ. ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆ ವೆಬ್ ಸೈಟ್ ನಲ್ಲಿ ಪ್ರಕಟ ಮಾಡಿದೆ. ದ್ವಿತೀಯ ಪಿಯುಸಿ ಪರೀಕ್ಷೆಯ ಅವಧಿಯನ್ನು 15 ನಿಮಿಷಗಳ ಕಾಲ ಇಳಿಕೆ ಮಾಡುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕಿಂಗ್‌ ನ್ಯೂಸ್‌/ ಪರೀಕ್ಷಾ ಅವಧಿ ೧೫ ನಿಮಿಷ ಕಡಿತ Read More »

ಮೂಡುಬಿದಿರೆ: ಆಳ್ವಾಸ್ ನಲ್ಲಿ ನೂತನ ಕಾನೂನು ಕಾಲೇಜು – ಮೋಹನ್ ಆಳ್ವ

ಸಮಗ್ರ ನ್ಯೂಸ್: ರಾಷ್ಟ್ರೀಯ, ಅಂತಾರಾಷ್ಟ್ರೀಯ ಮನ್ನಣೆ ಇರುವ ಶೈಕ್ಷಣಿಕ ಕಾರ್ಯಕ್ರಮಗಳ ಮೂಲಕ ಮಧ್ಯಮ ಮತ್ತು ಕೆಳವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣದ ಹೊಸ ಸಾಧ್ಯತೆಗಳನ್ನು ಪರಿಚಯಿಸಿದ ಹೆಗ್ಗಳಿಕೆಯ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನವು ತನ್ನಲ್ಲಿರುವ 19 ವಿವಿಧ ಶಿಕ್ಷಣ ಸಂಸ್ಥೆಗಳ ಜತೆಗೆ ನೂತನ ಕಾನೂನು ಕಾಲೇಜ್‌ ಅನ್ನು ಆರಂಭಿಸುತ್ತಿದೆ. ಈ ಶೈಕ್ಷಣಿಕ ವರ್ಷದಿಂದಲೇ 5 ವರ್ಷಗಳ, ಬಿಕಾಂ ಸಹಿತ ಎಲ್‌ಎಲ್‌ಬಿ ಮತ್ತು 3 ವರ್ಷಗಳ ಎಲ್‌ಎಲ್‌ಬಿ ಕೋರ್ಸಿಗೆ ದಾಖಲಾತಿ ಆರಂಭವಾಗಿದೆ ಎಂದು ಆಳ್ವಾಸ್‌ ಪ್ರವರ್ತಕ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ

ಮೂಡುಬಿದಿರೆ: ಆಳ್ವಾಸ್ ನಲ್ಲಿ ನೂತನ ಕಾನೂನು ಕಾಲೇಜು – ಮೋಹನ್ ಆಳ್ವ Read More »

ಉಜಿರೆ: ಗಣೇಶೋತ್ಸವ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ| ರಾಷ್ಟ್ರೀಯ ಹಿಂಜಾವೇ ಪ್ರಮುಖ್ ಮಹೇಶ್ ಶೆಟ್ಟಿ ವಿರುದ್ಧ ದೂರು

ಸಮಗ್ರ ನ್ಯೂಸ್: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಪ್ರಮುಖ ಮಹೇಶ್‌ ಶೆಟ್ಟಿ ತಿಮರೊಡಿ ಅವರು ಸೆ. 8ರಂದು ಉಜಿರೆಯಲ್ಲಿ ನಡೆದ ಸಾರ್ವಜನಿಕ ಗಣೇಶ ಚತುರ್ಥಿ ಹಬ್ಬದ ಸಭೆಯಲ್ಲಿ ಹಿಂದೂ ಮತ್ತು ಜೈನ ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ರೀತಿಯಲ್ಲಿ ಮಾತನಾಡಿದ್ದು, ಇದು ಧಾರ್ಮಿಕ ಭಾವನೆಗಳಿಗೆ ಘಾಸಿಯಾಗಿದೆ ಎಂದು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಸೆ. 12ರಂದು ಜೈನ ಸಮುದಾಯ ದೂರು ನೀಡಿದೆ. ಮಹೇಶ್‌ ಶೆಟ್ಟಿ ತಿಮರೋಡಿ ಅವರು ಸಾರ್ವಜನಿಕ ಸಂಸ್ಥೆಗಳ ವಿರುದ್ಧ ಅವಹೇಳನ ಮಾಡಿ ಅವಾಚ್ಯ ಮತ್ತು

ಉಜಿರೆ: ಗಣೇಶೋತ್ಸವ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ| ರಾಷ್ಟ್ರೀಯ ಹಿಂಜಾವೇ ಪ್ರಮುಖ್ ಮಹೇಶ್ ಶೆಟ್ಟಿ ವಿರುದ್ಧ ದೂರು Read More »

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ‌ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತನ್ನ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ನಿರ್ಣಾಯಕ ತೀರ್ಪು ನೀಡಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ತೀರ್ಪು ನೀಡಿದೆ. ನ್ಯಾಯಪೀಠವು ಸೆಪ್ಟೆಂಬರ್ ೫ ರಂದು ಅರ್ಜಿಗಳ ಮೇಲಿನ ತೀರ್ಪನ್ನು ಕಾಯ್ದಿರಿಸಿತ್ತು.

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ‌ ಜಾಮೀನು ಮಂಜೂರು Read More »

ಕುಕ್ಕೆ ದೇವಳದಲ್ಲಿ ಹೊಸ್ತಾರೋಗಣೆ; ಕದಿರು ಕಟ್ಟುವ ಕಾರ್ಯ| ವಿಶೇಷ ಕಾರ್ಯಕ್ರಮದಲ್ಲಿ ಸಂಭ್ರಮಿಸಿದ ಭಕ್ತಗಣ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಹೊಸ್ತಾರೋಗಣೆ ಮತ್ತು ಕದಿರು ಕಟ್ಟುವ ಕಾರ್ಯದ ವೈದಿಕ ವಿಧಿವಿಧಾನಗಳೊಂದಿಗೆ ಗುರುವಾರ ನೆರವೇರಿತು. ಈ ನಿಮಿತ್ತ ಪ್ರಾತಃಕಾಲ ಪಂಚಾಮೃತ ಮಹಾಭಿಷೇಕವನ್ನು ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಅವರು ನೆರವೇರಿಸಿದರು. ಅಭಿಷೇಕದ ಬಳಿಕ ಸೀತಾರಾಮ ಎಡಪಡಿತ್ತಾಯ ಅವರು ದರ್ಪಣತೀರ್ಥ ನದಿ ತೀರದಲ್ಲಿ ಭತ್ತದ ತೆನೆಗೆ ಪೂಜೆ ನೆರವೇರಿಸಿದರು. ಬಳಿಕ ತೆನೆಯನ್ನು ಮೆರವಣಿಗೆಯಲ್ಲಿ ದೇವಳಕ್ಕೆ ತರಲಾಯಿತು. ದೇವಳಕ್ಕೆ ಪ್ರದಕ್ಷಿಣೆ ಬಂದು ಅರ್ಚಕರು ತೆನೆಯನ್ನು ಗರ್ಭಗುಡಿಗೆ ಕೊಂಡೊಯ್ದರು. ನಂತರ ದೇವರ ಸನ್ನಿಧಿಯಲ್ಲಿ ಕದಿರು ಪೂಜೆ

ಕುಕ್ಕೆ ದೇವಳದಲ್ಲಿ ಹೊಸ್ತಾರೋಗಣೆ; ಕದಿರು ಕಟ್ಟುವ ಕಾರ್ಯ| ವಿಶೇಷ ಕಾರ್ಯಕ್ರಮದಲ್ಲಿ ಸಂಭ್ರಮಿಸಿದ ಭಕ್ತಗಣ Read More »

ರೊಟ್ಟಿ ಮುರಿದರೂ‌ ಬುದ್ದಿ ಕಲಿಯದ ದರ್ಶನ್| ಕ್ಯಾಮರಾ ಎದುರು ಮಿಡಲ್ ಫಿಂಗರ್ ತೋರಿ ಅಸಹ್ಯ ವರ್ತನೆ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್‌ ಅವರು ಪಶ್ಚಾತ್ತಾಪದ ದಿನಗಳನ್ನು ಕಳೆದಿದ್ದಾರೆ ಎಂಬ ಮಾತು ನಿಜಾನ? ಈ ಪ್ರಶ್ನೆ ಬರಲು ಕಾರಣ, ಅವರು ಕ್ಯಾಮೆರಾಗಳ ಮುಂದೆ ಅಸಹ್ಯ ಸಂಜ್ಞೆ ಮಾಡುವ ಮೂಲಕ ಮತ್ತದೇ ಚಾಳಿ ಮುಂದುವರೆಸಿರುವುದು. ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ ಅವರನ್ನು ಗುರುವಾರ ಅವರ ಪತ್ನಿ ವಿಜಯಲಕ್ಷ್ಮಿ ಹಾಗು ಸಹೋದರ ದಿನಕರ್‌ ತೂಗುದೀಪ ಅವರು ಭೇಟಿ ಮಾಡಲು ಬಂದಿದ್ದರು. ಅವರನ್ನು ನೋಡಲು ಪೊಲೀಸರ ಜೊತೆ ಬರುವಾಗ ತನ್ನ ಎರಡೂ

ರೊಟ್ಟಿ ಮುರಿದರೂ‌ ಬುದ್ದಿ ಕಲಿಯದ ದರ್ಶನ್| ಕ್ಯಾಮರಾ ಎದುರು ಮಿಡಲ್ ಫಿಂಗರ್ ತೋರಿ ಅಸಹ್ಯ ವರ್ತನೆ Read More »

ಇಂದು ಡಾ| ಸುಬ್ರಮಣಿಯನ್ ಸ್ವಾಮಿ ‌ಮಂಗಳೂರು ಭೇಟಿ

ಸಮಗ್ರ ನ್ಯೂಸ್::ವಿರಾಟ್‌ ಹಿಂದೂಸ್ಥಾನ್‌ ಸಂಗಮ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ಡಾ| ಸುಬ್ರಮಣಿಯನ್‌ ಸ್ವಾಮಿ ಅವರು ಸೆ.13ರಂದು ರಾತ್ರಿ ಮಂಗಳೂರಿಗೆ ಆಗಮಿಸಲಿದ್ದಾರೆ. ಸಂಜೆ ದಿಲ್ಲಿಯಿಂದ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಸೆ.14ರಂದು ಬೆಳಗ್ಗೆ 8 ಗಂಟೆಗೆ ರಸ್ತೆ ಮಾರ್ಗವಾಗಿ ಶೃಂಗೇರಿಗೆ ತೆರಳಲಿದ್ದಾರೆ. ಸೆ. 14 ಮತ್ತು 15ರಂದು ಅವರ 85ನೇ ವರ್ಷದ ಜನ್ಮದಿನಾಚರಣೆ ಹಾಗೂ ವಿಎಚ್‌ಎಸ್‌ ಪ್ರತಿನಿಧಿಗಳ ಸಮಾವೇಶ ಶೃಂಗೇರಿಯ ಅಭಿನವ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ಇಂದು ಡಾ| ಸುಬ್ರಮಣಿಯನ್ ಸ್ವಾಮಿ ‌ಮಂಗಳೂರು ಭೇಟಿ Read More »

ಕನ್ನಡಕದ ಬದಲು ಐ ಡ್ರಾಪ್ಸ್‌/ ನಿಷೇಧ ಹೇರಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್‌: ನಲವತ್ತು ವರ್ಷದ ಆಸುಪಾಸಿನವರಿಗೆ ಸಮೀಪ ದೃಷ್ಟಿದೋಷ ಉಂಟಾಗಿ ಓದಲು ತೊಂದರೆಯಾದಾಗ ಅದಕ್ಕೆ ಕನ್ನಡಕದ ಬದಲು ಬಳಸಬಹುದು ಎನ್ನಲಾಗಿದ್ದ ಐ ಡ್ರಾಪ್ಸ್‌ಗೆ ಕೇಂದ್ರ ಸರ್ಕಾರ ಪರವಾನಗಿಯನ್ನು ಅಮಾನತುಗೊಳಿಸಿದೆ. ಮುಂಬೈ ಮೂಲದ ಎಂಟೋಡ್‌ ಫಾರ್ಮಾಸ್ಯುಟಿಕಲ್ಸ್‌ ಕಂಪನಿ ತಾನು ‘ಪಿಲೋಕ್ಯಾರ್ಪೀನ್‌ ಹೈಡ್ರೋಕ್ಲೋರೈಡ್‌ ಆಪ್ತಾಲ್ಮಿಕ್‌ ಸೊಲ್ಯುಷನ್‌’ ಎಂಬ ಐ ಡ್ರಾಪ್ಸ್‌ ತಯಾರಿಸಿದ್ದು, ಅದನ್ನು ಕಣ್ಣಿಗೆ ಹಾಕಿಕೊಂಡರೆ ರೀಡಿಂಗ್‌ ಗ್ಲಾಸ್‌ನ ನೆರವಿಲ್ಲದೆ ಓದಬಹುದು ಎಂದು ಇತ್ತೀಚೆಗೆ ಹೇಳಿಕೆ ಬಿಡುಗಡೆ ಮಾಡಿತ್ತು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಭಾರತೀಯ ಔಷಧ ನಿಯಂತ್ರಣ ನಿರ್ದೇಶನಾಲಯ (ಡಿಸಿಜಿಐ),

ಕನ್ನಡಕದ ಬದಲು ಐ ಡ್ರಾಪ್ಸ್‌/ ನಿಷೇಧ ಹೇರಿದ ಕೇಂದ್ರ ಸರ್ಕಾರ Read More »

ಉಪ್ಪಿನಂಗಡಿ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ| ಪೋಕ್ಸೋ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ.14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಆರೋಪಿಯು ಫೋನ್ ಮೂಲಕ ಸಂಪರ್ಕ ಸಾಧಿಸಿಕೊಂಡು ಆತ್ಮೀಯತೆ ಬೆಳೆಸಿದ್ದಲ್ಲದೆ, ಕಳೆದ ಜು. 21 ರಂದು ಆಕೆಯನ್ನು ನೆಲ್ಯಾಡಿಗೆ ಬರಲು ಹೇಳಿ, ನೆಲ್ಯಾಡಿಗೆ ಬಂದ ಆಕೆಯನ್ನು ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ

ಉಪ್ಪಿನಂಗಡಿ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ| ಪೋಕ್ಸೋ ಪ್ರಕರಣ ದಾಖಲು Read More »