September 2024

ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿ‌ ವಿಚಾರಣೆ ಪೂರ್ಣ| ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ‌. ಸಿಎಂ ಸಿದ್ದರಾಮಯ್ಯ ಪರ ಅಭಿಷೇಕ್ ಮನು ಸಿಂಘ್ವಿ, ಪ್ರೊ.ರವಿವರ್ಮ ಕುಮಾರ್, ಸರಕಾರದ ಪರ ಎ.ಜಿ.ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು‌. ದೂರುದಾರ ಟಿ.ಜೆ.ಅಬ್ರಹಾಂ ಪರ ವಕೀಲ ರಂಗನಾಥ್ ರೆಡ್ಡಿ ಪ್ರತಿವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿ, ತೀರ್ಪು ಕಾಯ್ದಿರಿಸಿದೆ.

ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿ‌ ವಿಚಾರಣೆ ಪೂರ್ಣ| ತೀರ್ಪು ಕಾಯ್ದಿರಿಸಿದ ಹೈಕೋರ್ಟ್ Read More »

ಮಂಗಳೂರು: ಗೋಡೆ ಕುಸಿದು ಇಬ್ಬರು ಮೃತ್ಯು

ಸಮಗ್ರ ನ್ಯೂಸ್: ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ನಗರದ ಜೈಲ್ ರಸ್ತೆಯಲ್ಲಿ ಸೆ.12 ರಂದು ನಡೆದಿದೆ. ಮೃತಪಟ್ಟವರನ್ನು ಜೇಮ್ಸ್ ಜತ್ತನ್ನ ಮತ್ತು ಅಡ್ವಿನ್ ಜೆರಾಲ್ಡ್ ಮೊಬಿನ್ ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಮಂಗಳೂರು: ಗೋಡೆ ಕುಸಿದು ಇಬ್ಬರು ಮೃತ್ಯು Read More »

ವಾಲ್ಮೀಕಿ ನಿಗಮ ಅವ್ಯವಹಾರ/ ಶೀಘ್ರದಲ್ಲೇ ಬಿಜೆಪಿ ಪಾದಯಾತ್ರೆ

ಸಮಗ್ರ ನ್ಯೂಸ್‌: ವಾಲ್ಮೀಕಿ ನಿಗಮ ಅವ್ಯವಹಾರ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶೀಘ್ರದಲ್ಲೇ ಬಿಜೆಪಿ ಪಾದಯಾತ್ರೆ ನಡೆಸಲಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಕಾಂಗ್ರೆಸ್ ನಾಯಕರಿಗೆ ಕ್ಲೀನ್ ಚಿಟ್ ನೀಡಲು ಎಸ್‌ಐಟಿ ರಚಿಸಲಾಗಿದೆ ಎನ್ನಲಾಗಿದ್ದು, ಇದರ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಹೈಕಮಾಂಡ್ ನಮಗೆ ಸಲಹೆ ನೀಡಿದ್ದು, ವಾಲ್ಮೀಕಿ ಹಗರಣದಲ್ಲಿ ನಮ್ಮ ಎರಡನೇ ಹಂತದ ಹೋರಾಟ ಶುರುವಾಗಲಿದೆ ಎಂದು ಸುದ್ದಿಗಾರರೊಂದಿಗೆ ಹೇಳಿದ್ದಾರೆ. ಪಕ್ಷದ ಬೆಂಗಳೂರು-ಮೈಸೂರು ಪಾದಯಾತ್ರೆಯಲ್ಲಿ ಮುಡಾ ಹಗರಣ ಗಮನ ಸೆಳೆದಿತ್ತು. ಹೀಗಾಗಿ

ವಾಲ್ಮೀಕಿ ನಿಗಮ ಅವ್ಯವಹಾರ/ ಶೀಘ್ರದಲ್ಲೇ ಬಿಜೆಪಿ ಪಾದಯಾತ್ರೆ Read More »

ಷೇರು ಮಾರುಕಟ್ಟೆಯಲ್ಲಿ‌ ಗೂಳಿ ಗುದ್ದಾಟ| ಐತಿಹಾಸಿಕ ಅಂಕಗಳ ಮಟ್ಟ ತಲುಪಿದ ಸೆನ್ಸೆಕ್ಸ್

ಸಮಗ್ರ ನ್ಯೂಸ್: ಭಾರತೀಯ ಷೇರು ಮಾರುಕಟ್ಟೆ ಇತಿಹಾಸವನ್ನು ಸೃಷ್ಟಿಸಿದೆ. ಹೂಡಿಕೆದಾರರ ಭಾರೀ ಖರೀದಿಯಿಂದಾಗಿ, ಬಿಎಸ್‌ಇ ಸೆನ್ಸೆಕ್ಸ್ 1600 ಅಂಕಗಳ ಜಿಗಿತದೊಂದಿಗೆ ಮೊದಲ ಬಾರಿಗೆ 83000 ಅಂಕಗಳನ್ನ ದಾಟುವಲ್ಲಿ ಯಶಸ್ವಿಯಾಗಿದೆ. ನಿಫ್ಟಿ ಕೂಡ 500ಕ್ಕೂ ಹೆಚ್ಚು ಅಂಕಗಳ ಜಿಗಿತದೊಂದಿಗೆ 25,433 ಅಂಕಗಳ ಐತಿಹಾಸಿಕ ಗರಿಷ್ಠ ಮಟ್ಟವನ್ನ ತಲುಪಿತು. ಈ ಪರಿಣಾಮ ಇಂದು ಒಂದೇ ದಿನಕ್ಕೆ ಹೂಡಿಕೆದಾರರಿಗೆ ₹7 ಲಕ್ಷ ಕೋಟಿ ಲಾಭವಾಗಿದೆ. ಮಾರುಕಟ್ಟೆಯಲ್ಲಿನ ಈ ಬಲವಾದ ಆವೇಗದ ಶ್ರೇಯವು ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ಅದ್ಭುತ ಏರಿಕೆಗೆ ಹೋಗುತ್ತದೆ. ಅಲ್ಲದೆ,

ಷೇರು ಮಾರುಕಟ್ಟೆಯಲ್ಲಿ‌ ಗೂಳಿ ಗುದ್ದಾಟ| ಐತಿಹಾಸಿಕ ಅಂಕಗಳ ಮಟ್ಟ ತಲುಪಿದ ಸೆನ್ಸೆಕ್ಸ್ Read More »

ಹಿರಿಯ ಮಾರ್ಕ್ಸ್ ವಾದಿ CPI(M) ನಾಯಕ ಸೀತಾರಾಮ್ ಯಚೂರಿ ಇನ್ನಿಲ್ಲ

ಸಮಗ್ರ ನ್ಯೂಸ್: ತೀವ್ರ ಶ್ವಾಸಕೋಶದ ಸೋಂಕಿನಿಂದಾಗಿ ದೆಹಲಿಯ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ನಿಧನರಾಗಿದ್ದಾರೆ. 72 ವರ್ಷದ ಯೆಚೂರಿ ಅವರನ್ನು ಆಗಸ್ಟ್ 19 ರಂದು ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲಿಸಲಾಗಿತ್ತು. ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಸದಸ್ಯರಾದ ಒಂದು ವರ್ಷದ ನಂತರ 1975 ರಲ್ಲಿ ಸೀತಾರಾಮ್ ಯೆಚೂರಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ ವಾದಿ) ಗೆ

ಹಿರಿಯ ಮಾರ್ಕ್ಸ್ ವಾದಿ CPI(M) ನಾಯಕ ಸೀತಾರಾಮ್ ಯಚೂರಿ ಇನ್ನಿಲ್ಲ Read More »

ಬದಲಾದ ಪಿಎಸ್‌ಐ ಪರೀಕ್ಷಾ ದಿನಾಂಕ/ ಸೆ.22ರ ಬದಲು ಸೆ.28ಕ್ಕೆ

ಸಮಗ್ರ ನ್ಯೂಸ್‌: ಯುಪಿಎಸ್‌ಸಿ ಪರೀಕ್ಷೆ ಹಾಗೂ ಪಿಎಸ್‌ಐ ಪರೀಕ್ಷೆ ಒಂದೇ ದಿನ ನಿಗದಿಯಾಗಿರುವ ಹಿನ್ನಲೆಯಲ್ಲಿ, ಪಿಎಸ್‌ಐ ಪರೀಕ್ಷೆಯನ್ನು ಸೆ.22ರ ಬದಲು ಸೆ.28ರ ಶನಿವಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ವಿಚಾರವಾಗಿ ಐಪಿಎಸ್ ಪರೀಕ್ಷೆ ಮುಂದೂಡಿಕೆ ಮಾಡಲು ಮನವಿ ಮಾಡಲಾಗಿತ್ತು. ಅದರಂತೆ ಪಿಎಸ್‌ಐ ಪರೀಕ್ಷೆ ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ಆರು ಜಿಲ್ಲೆಗಳ ಒಟ್ಟು 164 ಕೇಂದ್ರಗಳಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಯನ್ನು ಸೆ.22ರಂದು ನಡೆಸಲು ಕರ್ನಾಟಕ ಪರೀಕ್ಷಾ

ಬದಲಾದ ಪಿಎಸ್‌ಐ ಪರೀಕ್ಷಾ ದಿನಾಂಕ/ ಸೆ.22ರ ಬದಲು ಸೆ.28ಕ್ಕೆ Read More »

ಬೆಂಗಳೂರು: ಗಾಂಜಾ ಮಾರಾಟಕ್ಕಿಳಿದ ವ್ಯಕ್ತಿ ಈಗ ಪೊಲೀಸರ ಅತಿಥಿ

ಸಮಗ್ರ ನ್ಯೂಸ್: ನಗರದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ತನ್ನ ಸಹೋದರಿಯ ಮದುವೆಯ ಖರ್ಚಿಗೆ ಪರಿಚಿತನೊಬ್ಬನ ಸಲಹೆಯಂತೆ ಗಾಂಜಾ ಮಾರಾಟವನ್ನು ಗುಪ್ತವಾಗಿ ನಡೆಸಿದ್ದಾನೆ. ಆರೋಪಿ ದ.ಕ. ಜಿಲ್ಲೆಯ ಪುತ್ತೂರು ಮೂಲದ ಬದ್ರುದ್ದೀನ್ ಎಂದು ತಿಳಿದುಬಂದಿದೆ. ಈತನಿಂದ 1 ಲಕ್ಷ ರೂ. ಮೌಲ್ಯದ 5 ಕೆ.ಜಿ 20 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈತ ಒಡಿಶಾಕ್ಕೆ ತೆರಳಿ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಇದೀಗ ಆರೋಪಿಯನ್ನು ಬಾಣಸವಾಡಿ ಠಾಣಾ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಹೊಟೇಲ್‌ನಲ್ಲಿನ ಸಂಬಳದಿಂದ

ಬೆಂಗಳೂರು: ಗಾಂಜಾ ಮಾರಾಟಕ್ಕಿಳಿದ ವ್ಯಕ್ತಿ ಈಗ ಪೊಲೀಸರ ಅತಿಥಿ Read More »

ಕುಕ್ಕೆ: ಭಕ್ತಾದಿಗಳಿಗೆ ಈಗ ತೀರ್ಥಸ್ನಾನಕ್ಕೆ ಶವರ್ ಬಾತ್ ವ್ಯವಸ್ಥೆ

ಸಮಗ್ರ ನ್ಯೂಸ್: ಕುಮಾರಧಾರ ನದಿಯಲ್ಲಿ ನೀರಿನ ಪ್ರಮಾಣ ಅಧಿಕವಾಗಿರುವ ಕಾರಣ ಸ್ನಾನ ಘಟ್ಟದ ಬಳಿ ದೇಗುಲದ ವತಿಯಿಂದ ಭಕ್ತರಿಗೆ ಶವರ್ ಬಾತ್ ವ್ಯವಸ್ಥೆ ಮಾಡಿದೆ. ಮಳೆಗಾಲ ಸಂದರ್ಭದಲ್ಲಿ ಯಾವುದೇ ಅನಾಹುತ ನಡೆಯಬಾರದು ಎನ್ನುವ ದೃಷ್ಠಿಯಲ್ಲಿ ದ.ಕ ಜಿಲ್ಲಾಧಿಕಾರಿ ಭಕ್ತರು ಕುಮಾರಧಾರ ನದಿಯಲ್ಲಿ ಇಳಿದು ತೀರ್ಥ ಸ್ನಾನ ಮಾಡದಂತೆ ಆದೇಶ ಹೊರಡಿಸಿದ್ದರು . ಹೀಗಾಗಿ ಆರಂಭದಲ್ಲಿ ತಾತ್ಕಾಲಿಕವಾಗಿ ಡ್ರಮ್ಮಿನಲ್ಲಿ ನದಿ ನೀರನ್ನು ತುಂಬಿ ತೀರ್ಥಸ್ನಾನ ಮಾಡಲು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಇದೀಗ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ಶವರ್ ವ್ಯವಸ್ಥೆ

ಕುಕ್ಕೆ: ಭಕ್ತಾದಿಗಳಿಗೆ ಈಗ ತೀರ್ಥಸ್ನಾನಕ್ಕೆ ಶವರ್ ಬಾತ್ ವ್ಯವಸ್ಥೆ Read More »

ನಾಗಮಂಗಲ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ‌ ಗಲಭೆ| 50 ಮಂದಿ‌ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ 50 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರು ಅಂಗಡಿಗಳಿಗೆ, ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, 13 ಅಂಗಡಿಗಳನ್ನು ಧ್ವಂಸ ಮಾಡಲಾಗಿದೆ. ಮೆರವಣಿಗೆ ಸಾಗುವಾಗ ಗಲ್ಲಿ ಗಲ್ಲಿಗಳಿಂದಲೂ ಕಲ್ಲುಗಳು ತೂರಿ ಬಂದಿವೆ. ಪೆಟ್ರೋಲ್ ಬಾಂಬ್, ಮಾರಕಾಸ್ತ್ರಗಳೊಂದಿಗೆ ಗಲಭೆ ಸೃಷ್ಟಿಸಲಾಗಿದೆ. ದರ್ಗಾದ ಬಳಿ ಗಣಪತಿ ಮೆರವಣಿಗೆ ಬಂದಾಗ ಘಟನೆ ನಡೆದಿದೆ. ಡೊಳ್ಳು, ತಮಟೆ ಬಾರಿಸಬೇಡಿ ಎಂದು ಮುಸ್ಲಿಂ ಯುವಕರು ಕಿರಿಕ್ ಮಾಡಿದ್ದಾರೆ. ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಹೆಚ್ಚಿನ ಪೊಲೀಸರನ್ನು

ನಾಗಮಂಗಲ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ‌ ಗಲಭೆ| 50 ಮಂದಿ‌ ಪೊಲೀಸ್ ವಶಕ್ಕೆ Read More »

ಅನ್ನದಾತರಿಗೆ ಗುಡ್ ನ್ಯೂಸ್| ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಸೂಚನೆ

ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ ಚರ್ಚೆ ನಡೆಸಿದ ಸಿಎಂ, ರೈತರ ಬೇಡಿಕೆಗಳನ್ನು ಪರಿಶೀಲಿಸಿ ಬಹು ಮುಖ್ಯವಾದ ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಕೃಷಿ ಪಂಪ್ಸೆಟ್

ಅನ್ನದಾತರಿಗೆ ಗುಡ್ ನ್ಯೂಸ್| ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಸೂಚನೆ Read More »