ಬೆಳ್ತಂಗಡಿ: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಸರ್ಕಾರಿ ಜಮೀನು ಒತ್ತುವರಿ| ಹೈಕೋರ್ಟ್ ನಿಂದ ಜಿಲ್ಲಾಡಳಿತಕ್ಕೆ ನೋಟೀಸ್ ಜಾರಿ
ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದಲ್ಲಿ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸರಕಾರಿ ಜಮೀನು ಒತ್ತುವರಿ ಮಾಡಿಕೊಂಡು ಅನಧಿಕೃತ ಕಟ್ಟಡ ನಿರ್ಮಾಣ ಮಾಡುತ್ತಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಈ ವಿಚಾರವಾಗಿ ತೆಂಕಕಾರಂದೂರು ಗ್ರಾಮದ ನಿವಾಸಿ ಅಶೋಕ್ ಆಚಾರ್ಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ […]