September 2024

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ| ದಮ್ಮಯ್ಯ ಹಾಕಿದರೂ ಕೇಳದೆ ಪ್ರಜ್ವಲ್ ನಿಂದ 60ರ ವೃದ್ದೆ ಮೇಲೆ ಅತ್ಯಾಚಾರ

ಸಮಗ್ರ ನ್ಯೂಸ್: ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗಿರುವ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುತ್ತಿರುವ CIDವಿಶೇಷ ತನಿಖಾ ತಂಡ (SIT)ವು ಸೋಮವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 2ನೇ ಆರೋಪಪಟ್ಟಿಯನ್ನು ಸಲ್ಲಿಸಿದೆ. 60 ವರ್ಷದ ಮನೆ ಕೆಲಸದಾಕೆ ಕೈ ಮುಗಿದು ಬೇಡಿಕೊಂಡರೂ ಬಿಡದೆ ಅತ್ಯಾಚಾರ ಎಸಗಿದ್ದಲ್ಲದೆ, ವೀಡಿಯೋ ಮಾಡಿಕೊಂಡಿರುವ ಬಗ್ಗೆ ಅದರಲ್ಲಿ ಉಲ್ಲೇಖೀಸಲಾಗಿದೆ. ತನ್ನ ಮನೆಯಲ್ಲಿ ಕೆಲಸಕ್ಕಿದ್ದ ಸುಮಾರು 60 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ, ವೀಡಿಯೋ ಮಾಡಿಕೊಂಡಿದ್ದರ ಸಹಿತ ಪ್ರಜ್ವಲ್‌ […]

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ| ದಮ್ಮಯ್ಯ ಹಾಕಿದರೂ ಕೇಳದೆ ಪ್ರಜ್ವಲ್ ನಿಂದ 60ರ ವೃದ್ದೆ ಮೇಲೆ ಅತ್ಯಾಚಾರ Read More »

ಹುಬ್ಬಳ್ಳಿ – ಪುಣೆ ಮಧ್ಯೆ 2ನೇ ವಂದೇ ಭಾರತ್ ರೈಲು/ ಗ್ರೀನ್‌ ಸಿಗ್ನಲ್‌ ನೀಡಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್‌: ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಅವರ ಪ್ರಸ್ತಾವನೆಗೆ ಸ್ಪಂದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಯವ್ ಅವರು ಹುಬ್ಬಳ್ಳಿ – ಪುಣೆ ಮಧ್ಯೆ 2ನೇ ವಂದೇ ಭಾರತ್ ರೈಲು ಆರಂಭಿಸುವ ಶುಭ ಸಂದೇಶ ನೀಡಿದ್ದಾರೆ. ಶೀಘ್ರದಲ್ಲೇ ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಧಾರವಾಡ

ಹುಬ್ಬಳ್ಳಿ – ಪುಣೆ ಮಧ್ಯೆ 2ನೇ ವಂದೇ ಭಾರತ್ ರೈಲು/ ಗ್ರೀನ್‌ ಸಿಗ್ನಲ್‌ ನೀಡಿದ ಕೇಂದ್ರ ಸರ್ಕಾರ Read More »

ವಾಯು ಮಾಲಿನ್ಯ ಹೆಚ್ಚಳದ ಸಾಧ್ಯತೆ/ ಪಟಾಕಿ ನಿಷೇಧಿಸಿದ ದೆಹಲಿ ಸರ್ಕಾರ

ಸಮಗ್ರ ನ್ಯೂಸ್‌: ಮುಂಬರುವ ಚಳಿಗಾಲದಲ್ಲಿ ದೆಹಲಿಯಲ್ಲಿ ವಾಯು ಮಾಲಿನ್ಯ ಮತ್ತೆ ಹೆಚ್ಚಾಗಲಿರುವ ಸಾಧ್ಯತೆ ಇರುವುದರಿಂದ, ಅದನ್ನು ನಿಯಂತ್ರಿಸಲು ದೆಹಲಿ ಸರ್ಕಾರ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ. ಆನ್‌ಲೈನ್‌ನಲ್ಲೂ ಪಟಾಕಿ ಮಾರಾಟ ಮತ್ತು ವಿತರಣೆಯನ್ನು ಸಹ ನಿಷೇಧಿಸಲಾಗಿದೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ದೆಹಲಿ ಪೊಲೀಸರು, ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ಕ್ರಿಯಾ ಯೋಜನೆಯನ್ನು

ವಾಯು ಮಾಲಿನ್ಯ ಹೆಚ್ಚಳದ ಸಾಧ್ಯತೆ/ ಪಟಾಕಿ ನಿಷೇಧಿಸಿದ ದೆಹಲಿ ಸರ್ಕಾರ Read More »

ತಾಂತ್ರಿಕ ದೋಷ/ ಗದ್ದೆಗೆ ಇಳಿದ ಸೇನಾ ಹೆಲಿಕಾಪ್ಟರ್‌

ಸಮಗ್ರ ನ್ಯೂಸ್‌: ಐಎಎಫ್‌ನ ತರಬೇತಿ ಹೆಲಿಕಾಪ್ಟರ್, ತಾಂತ್ರಿಕ ದೋಷದಿಂದಾಗಿ ಚೆನ್ನೈ ಬಳಿಯ ಪೊಪರಂದಲ್‌ನ ಗದ್ದೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಇಬ್ಬರು ಸಿಬ್ಬಂದಿ ಹಾರಾಟ ನಡೆಸುತ್ತಿದ್ದ ಹೆಲಿಕಾಪ್ಟರ್ ಸಲವಕ್ಕಂ ಪೊಲೀಸ್ ಠಾಣಾ ವ್ಯಾಪ್ತಿಯ ಪೊಪರಂದಲ್ ಪ್ರದೇಶಕ್ಕೆ ಸಮೀಪಿಸಿದಾಗ ಹಠಾತ್ತನೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಪರಿಣಾಮವಾಗಿ ಪೈಲಟ್ ಗದ್ದೆಯಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಸ್ವಲ್ಪ ಸಮಯದ ನಂತರ ಮತ್ತೊಂದು ಸೇನಾ ಹೆಲಿಕಾಪ್ಟರ್ ಮೂಲಕ ಸಿಬ್ಬಂದಿ ಬಂದು ತಾಂತ್ರಿಕ ದೋಷ ಸರಿಪಡಿಸಿ ಸೇನಾ ನೆಲೆಗೆ ಕೊಂಡೊಯ್ಯರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಂತ್ರಿಕ ದೋಷ/ ಗದ್ದೆಗೆ ಇಳಿದ ಸೇನಾ ಹೆಲಿಕಾಪ್ಟರ್‌ Read More »

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೂ ಮೊದಲೇ ಬಿಜೆಪಿ ಕಚೇರಿ ಸ್ಫೋಟಕ್ಕೆ ಸಂಚು..!

ಸಮಗ್ರ ನ್ಯೂಸ್: ಬೆಂಗಳೂರನ್ನೆ ಬೆಚ್ಚಿ ಬೀಳಿಸಿದ್ದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳಿಂದ ನಾಲ್ವರು ಆರೋಪಿಗಳ ವಿರುದ್ಧ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಆರೋಪಿಗಳಾದ ಅಬ್ದುಲ್ ಮತಿನ್ ತಾಹಾ, ಮುಸಾವೀರ್ ಹುಸೇನ್, ಶೋಯೆಬ್ ಮಿರ್ಜಾ ಸೇರಿ ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. 2024ರ ಜ.22ರಂದು ಅಯೋಧ್ಯೆಯಲ್ಲಿ ನಡೆದಿದ್ದ ಪ್ರಾಣಪ್ರತಿಷ್ಠಾಪನೆ ಸಮಾರಂಭ ದಿನದಂದು ಕರ್ನಾಟಕದ ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಪ್ಲ್ಯಾನ್ ವಿಫಲವಾದ ಹಿನ್ನೆಲೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಮೇಶ್ವರಂ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೂ ಮೊದಲೇ ಬಿಜೆಪಿ ಕಚೇರಿ ಸ್ಫೋಟಕ್ಕೆ ಸಂಚು..! Read More »

ದರ್ಶನ್‌ & ಗ್ಯಾಂಗ್‌ಗೆ ಸೆ.12ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ..!

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ಗೆ ಸೆಪ್ಟೆಂಬರ್ 12 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. 24ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ. ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನಟ ದರ್ಶನ್‌ನನ್ನು ಬಳ್ಳಾರಿ ಜೈಲಿನಿಂದ, ಪವಿತ್ರಾಗೌಡ ಮತ್ತಿತರನ್ನು ಪರಪ್ಪನ ಅಗ್ರಹಾರದಿಂದ ಹಾಗೂ ಮೈಸೂರು, ಬಳ್ಳಾರಿ, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರುಗಿ, ವಿಜಯಪುರದ ಜೈಲಿನಿಂದ ಒಟ್ಟು 17 ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಇದೀಗ ಸೆ.12ರವರೆಗೆ

ದರ್ಶನ್‌ & ಗ್ಯಾಂಗ್‌ಗೆ ಸೆ.12ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ..! Read More »

ಸೌಹಾರ್ದತೆ ಸಾರುತ್ತಿದ್ದ ಬೋಳಂತೂರು ಗಣೇಶೋತ್ಸವಕ್ಕೆ ಬ್ರೇಕ್| ಮುಸ್ಲಿಂ ಬಾಂಧವರು ಪಾನೀಯ, ಸಿಹಿ‌ ಹಂಚದಂತೆ ಮನವಿ ಮಾಡಿದ ಪತ್ರ ವೈರಲ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬೋಳಂತೂರು ಗಣೇಶೋತ್ಸವದಲ್ಲಿ ಹಿಂದೂ ಮುಸ್ಲಿಂ -ಸೌಹಾರ್ದತೆಗೆ ಬ್ರೇಕ್ ಬಿದ್ದಿದೆ! ಕೋಮು ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿರುವ ಜಿಲ್ಲೆಯ ಈ ಭಾಗದಲ್ಲಿ ಕಳೆದ ವರ್ಷ ಗಣೇಶೋತ್ಸವ ಮೆರವಣಿಗೆ ವೇಳೆ ಮುಸ್ಲಿಮರು ಸಿಹಿ ತಿಂಡಿ, ಪಾನೀಯ ಹಂಚಿದ್ದರು. ಆ ಮೂಲಕ ಸೌಹಾರ್ದತೆ ಮೆರೆದಿದ್ದು ಸುದ್ದಿಯಾಗಿತ್ತು. ಆದರೆ, ಈ ಬಾರಿ ಕಳೆದ ವರ್ಷದಂತೆ ಸಿಹಿ ತಿಂಡಿ, ಪಾನೀಯ ಹಂಚಬಾರದು ಎಂದು ಗಣೇಶೋತ್ಸವ ಆಯೋಜಿಸುವ ಸಮಿತಿಯವರೇ ಮುಸ್ಲಿಂ ಸಮುದಾಯದವರಿಗೆ ಪತ್ರ ಬರೆದಿದ್ದಾರೆ. ಮಸೀದಿಯೊಂದಕ್ಕೆ ಗಣೇಶೋತ್ಸವ ಆಯೋಜಕರು

ಸೌಹಾರ್ದತೆ ಸಾರುತ್ತಿದ್ದ ಬೋಳಂತೂರು ಗಣೇಶೋತ್ಸವಕ್ಕೆ ಬ್ರೇಕ್| ಮುಸ್ಲಿಂ ಬಾಂಧವರು ಪಾನೀಯ, ಸಿಹಿ‌ ಹಂಚದಂತೆ ಮನವಿ ಮಾಡಿದ ಪತ್ರ ವೈರಲ್ Read More »

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್/ ಸೆ.19 ಕ್ಕೆ ವಿಚಾರಣೆ ಮುಂದೂಡಿಕೆ

ಸಮಗ್ರ ನ್ಯೂಸ್‌: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಪೋಕೋ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದ್ದು, ಸೆ.19 ಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣ ರದ್ದುಪಡಿಸುವಂತೆ ಹಾಗೂ ಈ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆಯನ್ನು ನಡೆಸಿದ್ದು.. ಸೆ.19 ಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಅಪ್ರಾಪ್ತಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್/ ಸೆ.19 ಕ್ಕೆ ವಿಚಾರಣೆ ಮುಂದೂಡಿಕೆ Read More »

ಮಂಗಳೂರು: ತುಳು ಲಿಪಿಗೆ ಯುನಿಕೋಡ್ ಮಾನ್ಯತೆ

ಸಮಗ್ರ ನ್ಯೂಸ್: ತುಳು ಲಿಪಿಗೆ ಯುನಿಕೋಡ್ ಮಾನ್ಯತೆ ನೀಡಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಹಾಗೂ ಸಮಸ್ತ ತುಳುವರ ಬಹು ವರ್ಷದ ಕನಸು ಈಡೇರಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಭಿಪ್ರಾಯಪಟ್ಟಿದ್ದಾರೆ. ಹಲವು ತಜ್ಞರು ಈ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದ ಸಂದರ್ಭದಲ್ಲಿ 2017 ರಲ್ಲಿ ಅಂದಿನ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅವರು ವಿಷಯ ಸಮನ್ವಯತೆಗಾಗಿ ತಜ್ಞರ ಸಮಿತಿ ರಚಿಸಿ ಅಕಾಡೆಮಿ ವತಿಯಿಂದ ಸಹಕಾರ ನೀಡಲಾಗಿತ್ತು. ತುಳು ಲಿಪಿಯನ್ನು ಯೂನಿಕೋಡ್ ಅಂಗೀಕರಿಸುವ

ಮಂಗಳೂರು: ತುಳು ಲಿಪಿಗೆ ಯುನಿಕೋಡ್ ಮಾನ್ಯತೆ Read More »

ಹಿರಿಯ ಪತ್ರಕರ್ತ ವಸಂತ ನಾಡಿಗೇರ ಇನ್ನಿಲ್ಲ

ಸಮಗ್ರ ನ್ಯೂಸ್: ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಸೋಮವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಸಂತ್​ ನಾಡಿಗೇರ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ವಸಂತ್​ ನಾಡಿಗೇರ ಅವರು ಶೀರ್ಷಿಕೆಗಳ ಮೂಲಕವೇ ಮನೆ ಮಾತಾಗಿದ್ದರು. ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು. ಇವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ

ಹಿರಿಯ ಪತ್ರಕರ್ತ ವಸಂತ ನಾಡಿಗೇರ ಇನ್ನಿಲ್ಲ Read More »