September 2024

ದ.ಕ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಯನ್ನು ನಂದನವನವಾಗಿ ಪರಿವರ್ತಿಸಿ, ವಿದ್ಯಾರ್ಥಿಗಳ ಪ್ರತಿಭೆಗೆ ನೀರೆರೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ಈ ಬಾರಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಮೂಡುಬಿದಿರೆ ತಾಲ್ಲೂಕಿನ ನೀರ್ಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಯಮುನಾ ಕೆ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಬೆಳ್ತಂಗಡಿ ತಾಲ್ಲೂಕು ಗುರುವಾಯನಕೆರೆಯ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ವಿಶ್ವನಾಥ ಗೌಡ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಗುರುವಾರ ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ […]

ದ.ಕ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ Read More »

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ| ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಸಮಗ್ರ ನ್ಯೂಸ್: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಇಂದು ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಅತ್ಯಾಚಾರ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣ ಜಾಮೀನು ಕೋರಿ

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ| ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್ Read More »

ಹವಾಮಾನ ವರದಿ| ಸೆ.05ರಂದು ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುರುವಾರವೂ (ಸೆ.05) ಮಳೆ ಮುಂದುವರಿಯಲಿದ್ದು, ರಾಜ್ಯದ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಹಳದಿ ಅಲರ್ಟ್‌ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್‌, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗುರುವಾರ ಭಾರಿ ಮಳೆಯಾಗಲಿದೆ.ಈ ಜಿಲ್ಲೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ಹಳದಿ ಅಲರ್ಟ್‌ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ

ಹವಾಮಾನ ವರದಿ| ಸೆ.05ರಂದು ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ಪೊಲೀಸರಿಂದ 3991ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಸಮಗ್ರ ನ್ಯೂಸ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಕೋರ್ಟ್ ಗೆ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿಯೆಂದು ಉಲ್ಲೇಖಿಸಲಾಗಿದೆ. ಆರೋಪಿ ನಟ ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 17 ಮಂದಿಯ ವಿರುದ್ಧ 3,991 ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿಯ ಮುದ್ರಿತ ಪ್ರತಿಯನ್ನು ತನಿಖಾ ತಂಡವು ನ್ಯಾಯಾಲಯಕ್ಕೆ ಸಲ್ಲಿಸಿದೆ. ಮೂವರು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ, ಎಂಟು ವರದಿಗಳು, 231ಕ್ಕೂ ಹೆಚ್ಚು ಸಾಕ್ಷ್ಯಾಧಾರಗಳ ಹೇಳಿಕೆಯ ಸಹಿತ ಇದುವರೆಗಿನ ತನಿಖಾ ಮಾಹಿತಿಯನ್ನು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಪ್ರಕರಣ| ಪೊಲೀಸರಿಂದ 3991ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ Read More »

ಸುಬ್ರಮಣ್ಯ: ರಸ್ತೆ ಗುಂಡಿ ಅಳತೆ ಮಾಡಿ ಆಕ್ರೋಶ ಹೊರಹಾಕಿದ ನಾಗರೀಕರು

ಸಮಗ್ರ ನ್ಯೂಸ್: ಧರ್ಮಸ್ಥಳ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರಾ ಬಳಿ ಹೆದ್ದಾರಿಯಲ್ಲಿ ಬೃಹತ್‌ ಹೊಂಡ ನಿರ್ಮಾಣಗೊಂಡಿದ್ದು, ಅಪಾಯವನ್ನು ಆಹ್ವಾನಿಸುವಂತಿದೆ. ಜತೆಗೆ ಸಂಚಾರಕ್ಕೂ ಕಷ್ಟವಾಗುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಹೆದ್ದಾರಿಯ ಹೊಂಡ- ಗುಂಡಿಗಳನ್ನು ದುರಸ್ತಿ ಮಾಡದೇ ಇರುವ ಬಗ್ಗೆ ಸಾರ್ವಜ ನಿಕರು ಆಕ್ರೋಶ ವ್ಯಕ್ತಪಡಿಸಿ, ಹೊಂಡಕ್ಕೆ ಅಳತೆ ಮಾಪಕ ಹಿಡಿದು ಈ ಹೊಂಡ ಎಷ್ಟು ಅಗಲ ಹಾಗೂ ಆಳ ಇದೆ ಎಂದು ಅಳೆಯುವ ಮೂಲಕ ವ್ಯಂಗ್ಯವಾಗಿ ಅಸಮಾಧಾನ

ಸುಬ್ರಮಣ್ಯ: ರಸ್ತೆ ಗುಂಡಿ ಅಳತೆ ಮಾಡಿ ಆಕ್ರೋಶ ಹೊರಹಾಕಿದ ನಾಗರೀಕರು Read More »

‘ ನಾನು ಆರೋಗ್ಯವಾಗಿದ್ದೇನೆ, ಯಾರೂ ಆತಂಕ ಪಡಬೇಡಿ’ | ಮಾಜಿ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಸಮಗ್ರ ನ್ಯೂಸ್: ನಾನು ಆರೋಗ್ಯವಾಗಿದ್ದೇನೆ. ಯಾರೂ ಅಂತಕ ಪಡಬೇಡಿ ಎಂಬುದಾಗಿ ಮಾಜಿ ಶಿಕ್ಷಣ ಸಚಿವ, ಹಾಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಮಾಧ್ಯಮಗಳಲ್ಲಿ ತಮ್ಮ‌ ಅನಾರೋಗ್ಯ ಕುರಿತಂತೆ ಪ್ರಸಾರವಾಗುತ್ತಿರುವ ವದಂತಿಗಳನ್ನು ನಂಬುವುದು ಬೇಡ. ನಾನು ಆರೋಗ್ಯವಾಗಿದ್ದೇನೆ ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ನನಗೆ ಕೆಲ ದಿನಗಳಿಂದ ಚಿಕೂನ್ ಗುನ್ಯಾ ಬಾಧಿಸಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ

‘ ನಾನು ಆರೋಗ್ಯವಾಗಿದ್ದೇನೆ, ಯಾರೂ ಆತಂಕ ಪಡಬೇಡಿ’ | ಮಾಜಿ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ Read More »

ಕಡಬ: ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಎರಚಿದ ಪ್ರಕರಣ| ಆರೋಪಿಯ ಜಾಮೀನು ಅರ್ಜಿ ವಜಾ

ಸಮಗ್ರ ನ್ಯೂಸ್: ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪದಡಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಯುವಕನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸರಿತಾ.ಡಿ. ಅವರು ವಜಾಗೊಳಿಸಿದ್ದಾರೆ. ಕೇರಳ ಮಲ್ಲಾಪುರದ ಅಬಿನ್.ಪಿ.ಸಿ.ಬಿ. ಎಂಬಾತ ತನ್ನನ್ನು ನಿರ್ಲಕ್ಷಿಸುತ್ತಿದ್ದಾಳೆ ಎಂಬ ಕಾರಣದಿಂದ ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಸಮವಸ್ತ್ರವನ್ನು ಹೊಲಿಸಿ ಪಡೆದುಕೊಂಡು ಕೊಯಮತ್ತೂರಿನಿಂದ ಆ್ಯಸಿಡ್ ಖರೀದಿಸಿ ಸಮವಸ್ತ್ರ ಧರಿಸಿಕೊಂಡು ಮಾ. 4ರಂದು

ಕಡಬ: ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಎರಚಿದ ಪ್ರಕರಣ| ಆರೋಪಿಯ ಜಾಮೀನು ಅರ್ಜಿ ವಜಾ Read More »

ಮಂಗಳೂರು: ರಿಕ್ಷಾ ಪಾರ್ಕಿಂಗ್ ನಲ್ಲಿ ಕ್ಯೂನಲ್ಲಿರುವಾಗಲೇ ಹೃದಯಾಘಾತ| ಆಟೋ ಚಾಲಕ ಸಾವು

ಸಮಗ್ರ ನ್ಯೂಸ್: ರಿಕ್ಷಾ ಪಾರ್ಕ್ ನಲ್ಲಿ ಕ್ಯೂನಲ್ಲಿರುವಾಗಲೇ ಆಟೋ ಚಾಲಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ಬಳಿ ನಡೆದಿದೆ. ಮಂಗಳೂರಿನ ಬಜಾಲ್ ವಿದ್ಯಾನಗರ ನಿವಾಸಿ ಇಕ್ಬಾಲ್(47) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲು ಕ್ಯೂನಲ್ಲಿ ಆಟೋ ನಿಲ್ಲಿಸಿ ಕಾಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಏಕಾಏಕಿ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾದ ಇಕ್ಬಾಲ್ ಅವರನ್ನು ತಕ್ಷಣವೇ ಇತರ ರಿಕ್ಷಾ ಚಾಲಕರು ಆಸ್ಪತ್ರೆಗೆ

ಮಂಗಳೂರು: ರಿಕ್ಷಾ ಪಾರ್ಕಿಂಗ್ ನಲ್ಲಿ ಕ್ಯೂನಲ್ಲಿರುವಾಗಲೇ ಹೃದಯಾಘಾತ| ಆಟೋ ಚಾಲಕ ಸಾವು Read More »

‘ಮಂಗಳೂರಿನಲ್ಲಿ ತುಳುವೇ ಮಾತೃ ಭಾಷೆ’ | ಸೋಶಿಯಲ್ ಮೀಡಿಯಾ ಸ್ಟಾರ್ ರಕ್ಷಿತಾ ಹೇಳಿಕೆಗೆ ತುಳುವರು ಫುಲ್ ಖುಷ್; ಕನ್ನಡಿಗರ ಕಿರಿಕ್

ಸಮಗ್ರ ನ್ಯೂಸ್: ತುಳು ಭಾಷೆಯ ಹಾಸ್ಯ ವಿಡಿಯೋಗಳಿಗೆ ಹೆಸರುವಾಸಿಯಾದ ಕಾಂಟೆಂಟ್‌ ಕ್ರಿಯೇಟರ್‌ ರಕ್ಷಿತಾ ವಿವಾದವೊಂದನ್ನು ಸೃಷ್ಟಿಸಿದ್ದಾಳೆ. ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಆದರೆ ಮಂಗಳೂರಲ್ಲಿ ಮಾತೃಭಾಷೆ ತುಳು ಎಂದು ಹೇಳಿದ್ದು, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾಳೆ. ರಕ್ಷಿತಾ ಬೆಂಗಳೂರು ಪ್ರವಾಸದ ವೇಳೆ ಆಟೋ ರಿಕ್ಷಾದಲ್ಲಿ ಹೋಗುತ್ತಿದ್ದಾಗ ತಾನೇ ಸೆರೆಹಿಡಿದ ವಿಡಿಯೋದಲ್ಲಿ ವಿವಾದಿತ ಹೇಳಿಕೆಯನ್ನು ನೀಡಿದ್ದಾಳೆ. ಆಟೋ ಚಾಲಕ, ಕರ್ನಾಟಕದ ಮಾತೃಭಾಷೆ ಕನ್ನಡ, ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ರಕ್ಷಿತಾ, ಕರ್ನಾಟಕದಲ್ಲಿ ಕನ್ನಡ ಆದರೆ ಮಂಗಳೂರಲ್ಲಿ ನನ್ನ ಮಾತೃಭಾಷೆ ತುಳು. ಅರ್ಥ ಆಯ್ತಾ?

‘ಮಂಗಳೂರಿನಲ್ಲಿ ತುಳುವೇ ಮಾತೃ ಭಾಷೆ’ | ಸೋಶಿಯಲ್ ಮೀಡಿಯಾ ಸ್ಟಾರ್ ರಕ್ಷಿತಾ ಹೇಳಿಕೆಗೆ ತುಳುವರು ಫುಲ್ ಖುಷ್; ಕನ್ನಡಿಗರ ಕಿರಿಕ್ Read More »

ಮಾಜಿ ಸಚಿವ, ಶಾಸಕ ಸುರೇಶ್ ಕುಮಾರ್ ಗಂಭೀರ| ಮೆದುಳಿಗೂ ವ್ಯಾಪಿಸಿದ ಚಿಕೂನ್ ಗುನ್ಯಾ

ಸಮಗ್ರ ನ್ಯೂಸ್: ಮಾಜಿ ಸಚಿವ, ಬೆಂಗಳೂರಿನ ರಾಜಾಜಿನಗರ ಕ್ಷೇತ್ರದ (ಬಿಜೆಪಿ) ಶಾಸಕ ಸುರೇಶ್ ಕುಮಾರ್ ಚಿಕೂನ್ ಗುನ್ಯಾದಲ್ಲಿ ಕಾಣಿಸಿಕೊಂಡ ಹೊಸ ರೂಪದ ಕಾಯಿಲೆಗೆ ಈಡಾಗಿದ್ದು, ಅವರ ಬ್ರೈನ್ ಮತ್ತು ಸ್ಪೈನಲ್‌ ಕಾರ್ಡ್‌ನಲ್ಲಿಯೂ ಸಮಸ್ಯೆ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪರೂಪದ ಮ್ಯೂಟೆಂಟ್ ಚಿಕೂನ್ ಗುನ್ಯಾ ಜ್ವರದ ಲಕ್ಷಣ ಅವರಲ್ಲಿ ಕಾಣಿಸಿಕೊಂಡಿದ್ದು, ನಾಲ್ಕೂವರೆ ಲಕ್ಷದ ನಾಲ್ಕು ಇಂಜೆಕ್ಷನ್ ಪಡೆದಿದ್ದಾರೆನ್ನಲಾಗಿದೆ. ಇನ್ನೂ ಕನಿಷ್ಠ ಒಂದು ವಾರ ಅವರು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ ಎಂದು

ಮಾಜಿ ಸಚಿವ, ಶಾಸಕ ಸುರೇಶ್ ಕುಮಾರ್ ಗಂಭೀರ| ಮೆದುಳಿಗೂ ವ್ಯಾಪಿಸಿದ ಚಿಕೂನ್ ಗುನ್ಯಾ Read More »