September 2024

ಕೆಕೆಆರ್‌ ತಂಡ ಸೇರಿದ ಡ್ವೇನ್‌ ಬ್ರಾವೋ/ ಗಂಭೀರ್‌ ಸ್ಥಾನ ತುಂಬಲಿರುವ ಕೆರೆಬಿಯನ್‌ ಆಟಗಾರ

ಸಮಗ್ರ ನ್ಯೂಸ್‌: ಐಪಿಎಲ್‌ನ ಕಳೆದ ಆವೃತ್ತಿಯ ಚಾಂಪಿಯನ್ ಕೆಕೆಆರ್ ತಂಡಕ್ಕೆ ಹೊಸಬರ ಎಂಟ್ರಿಯಾಗಿದ್ದು, ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ ಅವರ ಸ್ಥಾನಕ್ಕೆ ಅನುಭವಿ ಕ್ರಿಕೆಟಿಗ ಡ್ರೈನ್ ಬ್ರಾವೋ ಅವರನ್ನು ನೇಮಕ ಮಾಡಲಾಗಿದೆ ಎಂದು ಕೆಕೆಆರ್ ಫ್ರಾಂಚೈಸಿ ತಿಳಿಸಿದೆ. ಪ್ರಸ್ತುತ ವೆಸ್ಟ್ ಇಂಡೀಸ್‌ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡುತ್ತಿದ್ದ ಬ್ರಾವೋ, ಗಾಯದ ಕಾರಣದಿಂದಾಗಿ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದರು. ಇದೀಗ ಐಪಿಎಲ್‌ ನಲ್ಲಿ ಹೊಸ ತಂಡದೊಂದಿಗೆ ಕಾಣಿಸಿಕೊಳ್ಳಲಿದ್ದು, ಸಿಎಸ್‌ಕೆ ತಂಡದೊಂದಿಗಿನ ಬಹಳ ವರ್ಷಗಳ […]

ಕೆಕೆಆರ್‌ ತಂಡ ಸೇರಿದ ಡ್ವೇನ್‌ ಬ್ರಾವೋ/ ಗಂಭೀರ್‌ ಸ್ಥಾನ ತುಂಬಲಿರುವ ಕೆರೆಬಿಯನ್‌ ಆಟಗಾರ Read More »

ಊಟದ ತಟ್ಟೆಯಲ್ಲಿ ಹಲ್ಲಿ ಪತ್ತೆ..!ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..!

ಸಮಗ್ರ ನ್ಯೂಸ್: ಅರಕಲಗೂಡು ತಾಲೂಕಿನ ರಾಗಿಮರೂರು ಗ್ರಾಮದ ಶಾಲೆಯಲ್ಲಿ, ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿದ 20ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಸೆ.26 ರಂದು ನಡೆದಿದೆ. ಬಿಸಿಯೂಟ ಸೇವಿಸಿದ್ದ ಸುಮಾರು ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕ್ಷೇತ್ರಾಧಿಕಾರಿ ಭೇಟಿ ನೀಡಿ, ಪರಿಶೀಲನೆ ನಡೆಸಿದಾಗ ಊಟದ ತಟ್ಟೆಯಲ್ಲಿ ಹಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.

ಊಟದ ತಟ್ಟೆಯಲ್ಲಿ ಹಲ್ಲಿ ಪತ್ತೆ..!ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! Read More »

ಪಡಿತರ ಚೀಟಿದಾರರೇ E-KYC ಮಾಡಿಸದಿದ್ದರೇ ಮುಂದಿನ ತಿಂಗಳು ರೇಷನ್ ಸ್ಥಗಿತ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಪಡಿತರ ಚೀಟಿಗೆ ಕುಟುಂಬ ಸದಸ್ಯರ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದ್ದು,ಇನ್ನೂ ಕೆಲವರು ಇ-ಕೆವೈಸಿ ಮಾಡಿರುವುದಿಲ್ಲ. ಇಂತಹವರಿಗೆ ರೇಷನ್ ನೀಡುವುದನ್ನು ಮುಂದಿನ ತಿಂಗಳಿನಿಂದ ನಿಲ್ಲಿಸಲಾಗಿದೆ. ಈ ಕುರಿತಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಮಾಹಿತಿ ನೀಡಿದ್ದು, ಪ್ರತಿಯೊಂದು ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದೆ ಎಂದಿದ್ದಾರೆ. ಸೆ.30 ರ ಒಳಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಡಲಾಗಿದೆ.ಇ-ಕೆವೈಸಿ

ಪಡಿತರ ಚೀಟಿದಾರರೇ E-KYC ಮಾಡಿಸದಿದ್ದರೇ ಮುಂದಿನ ತಿಂಗಳು ರೇಷನ್ ಸ್ಥಗಿತ Read More »

ತಿಮರೆ ಎಲೆ ತಿನ್ನುವುದರಿಂದ ಕೇವಲ 30 ದಿನಗಳಲ್ಲಿ ನಿಮ್ಮ ಬುದ್ಧಿ ಶಕ್ತಿಯನ್ನು ಹೆಚ್ಚಿಸಬಹುದು

ಸಮಗ್ರ ನ್ಯೂಸ್: ತಿಮರೆ ಎಲೆ ಬ್ರಾಹ್ಮ ಎಲೆ, ಒಂದೆಲಗಾ, ಸರಸ್ವತಿ ಎಲೆ ಎಂಬೆಲ್ಲಾ ಹೆಸರಿನಿಂದ ಕರೆಯಲ್ಪಡುವ ಈ ಎಲೆ ಬುದ್ಧಿ ಶಕ್ತಿಯನ್ನು ಹೆಚ್ಚಿಸುತ. ಜ್ಞಾಪಕ ಶಕ್ತಿ ಮತ್ತು ಏಕಾಗ್ರತೆಯನ್ನು ಹೆಚ್ಚಿಸಲು ಪ್ರತಿದಿನ ಸರಸ್ವತಿ ಎಲೆಗಳ ರಸವನ್ನು ಕುಡಿಯಬೇಕು.ಇದರಲ್ಲಿರುವ ಗುಣಲಕ್ಷಣಗಳು ದೇಹದ ಶಕ್ತಿಯನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ.ಇದಲ್ಲದೆ, ದೇಹವನ್ನು ಆರೋಗ್ಯ ಸಮಸ್ಯೆಗಳಿಂದ ರಕ್ಷಿಸುತ್ತದೆ. ಬ್ರಾಹ್ಮ ಎಲೆಗಳನ್ನು ಮೊದಲು ಬಿಸಿಲಿನಲ್ಲಿ ಒಣಗಿಸಬೇಕು. ಅದರ ನಂತರ ಅವುಗಳನ್ನು ಪುಡಿಯಂತೆ ಮಾಡಬೇಕು. ಮೂರು ಕಾಳು ಮೆಣಸು, ಸಾಕಷ್ಟು ನೀರು ಮತ್ತು ಜೇನುತುಪ್ಪವನ್ನು

ತಿಮರೆ ಎಲೆ ತಿನ್ನುವುದರಿಂದ ಕೇವಲ 30 ದಿನಗಳಲ್ಲಿ ನಿಮ್ಮ ಬುದ್ಧಿ ಶಕ್ತಿಯನ್ನು ಹೆಚ್ಚಿಸಬಹುದು Read More »

ಪುತ್ತೂರು: ಪ್ರತಿಷ್ಠಿತ ತಿರುಮಲ‌ ಹೊಂಡಾ ಶೋರೂಂ ಮಾಲೀಕರ ದರ್ಬಾರ್| 2 ಕೋಟಿ ಸಾಲ ಬಾಕಿ ಕೇಳಲು ಹೋದ ಬ್ಯಾಂಕ್ ಸಿಬ್ಬಂದಿಗೆ ಗನ್ ತೋರಿಸಿ ಜೀವ ಬೆದರಿಕೆ| ಶಸ್ತ್ರಾಸ್ತ್ರ ಕಾಯ್ದೆಯಡಿ‌ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಪುತ್ತೂರಿನ ಪ್ರತಿಷ್ಠಿತ ಶೋರೂಂ ಗಳಲ್ಲಿ ಒಂದಾದ ತಿರುಮಲ ಹೊಂಡಾ ಮಾಲಕರ 2 ಕೋಟಿ ಸಾಲ ಬಾಕಿಯಾಗಿದ್ದು ಮರುಪಾವತಿಗಾಗಿ ಮನೆಗೆ ಹೋದ SBI ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಘಟನೆ ನಡೆದಿದ್ದು, ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪುತ್ತೂರು ಕೋರ್ಟ್ ರೋಡ್ ನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ರಿಲೇಷನ್ ಶಿಪ್ ಮ್ಯಾನೇಜರ್ ಆದ ಚಿಕ್ಕಮಗಳೂರು ಕೊಪ್ಪ ತಾಲೂಕು ನಿವಾಸಿಯಾದ ಶ್ರೀ ಚೈತನ್ಯ ಹೆಚ್.ಸಿ (40)ರವರ ದೂರಿನಂತೆ ಪ್ರಕರಣ ದಾಖಲಾಗಿದೆ. ಈ ಬ್ಯಾಂಕ್‌

ಪುತ್ತೂರು: ಪ್ರತಿಷ್ಠಿತ ತಿರುಮಲ‌ ಹೊಂಡಾ ಶೋರೂಂ ಮಾಲೀಕರ ದರ್ಬಾರ್| 2 ಕೋಟಿ ಸಾಲ ಬಾಕಿ ಕೇಳಲು ಹೋದ ಬ್ಯಾಂಕ್ ಸಿಬ್ಬಂದಿಗೆ ಗನ್ ತೋರಿಸಿ ಜೀವ ಬೆದರಿಕೆ| ಶಸ್ತ್ರಾಸ್ತ್ರ ಕಾಯ್ದೆಯಡಿ‌ ಪ್ರಕರಣ ದಾಖಲು Read More »

ಮೈಸೂರು ದಸರಾಕ್ಕೆ ದಿನಗಣನೆ/ ಆನೆ ಮತ್ತು ಕುದುರೆಗಳಿಗೆ ಕುಶಾಲತೋಪು ಪೂರ್ವಭಾವಿ ಅಭ್ಯಾಸ

ಸಮಗ್ರ ನ್ಯೂಸ್‌: ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆನೆ ಮತ್ತು ಕುದುರೆಗಳಿಗೆ ಕುಶಾಲತೋಪು ಪೂರ್ವಭಾವಿ ಅಭ್ಯಾಸವನ್ನು ವಾಹನ ನಿಲುಗಡೆ ಸ್ಥಳದಲ್ಲಿ ನಡೆಸಲಾಯಿತು. ಕ್ಯಾಪ್ಟನ್ ಅಭಿಮನ್ಯು ನೇತ್ರತ್ವದ ಗಜಪಡೆಗೆ ಇಂದು 21 ಕುಶಾಲ ತೋಪು ಹಾರಿಸುವ ಮೂಲಕ ಈ ಅಭ್ಯಾಸ ನಡೆಸಲಾಯಿತು. ಮೈಸೂರು ದಸರಾದ ಆಕರ್ಷಣೆಯ ವಾದ ಜಂಬುಸವಾರಿ ದಿನದಂದು ಅರಮನೆ ಆವರಣದಲ್ಲಿ ನಾಡ ಅದಿದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮುನ್ನ 21 ಕುಶಾಲತೋಪನ್ನು ಹಾರಿಸಲಾಗುತ್ತದೆ. ಆನೆಗಳು ಕುದುರೆಗಳು ಈ

ಮೈಸೂರು ದಸರಾಕ್ಕೆ ದಿನಗಣನೆ/ ಆನೆ ಮತ್ತು ಕುದುರೆಗಳಿಗೆ ಕುಶಾಲತೋಪು ಪೂರ್ವಭಾವಿ ಅಭ್ಯಾಸ Read More »

ಬೆಳ್ತಂಗಡಿ: ನಿಡ್ಲೆ ಗ್ರಾಮ ಲೆಕ್ಕಾಧಿಕಾರಿಪೃಥ್ವಿರಾಜ್ ಪಿ.ಶೆಟ್ಟಿ ಗೆ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೃಥ್ವಿರಾಜ್ ಪಿ. ಶೆಟ್ಟಿ ಯವರು ಸೆ.27 ರಂದು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ವಿಕಾಸ ಸೌಧದ ಕೊಠಡಿ ಸಂಖ್ಯೆ 419 ರಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅಚ್ಚುಕಟ್ಟಾಗಿ ಒದಗಿಸಿರುವ ಅಧಿಕಾರಿಗಳ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮಾಡಳಿತ

ಬೆಳ್ತಂಗಡಿ: ನಿಡ್ಲೆ ಗ್ರಾಮ ಲೆಕ್ಕಾಧಿಕಾರಿಪೃಥ್ವಿರಾಜ್ ಪಿ.ಶೆಟ್ಟಿ ಗೆ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ Read More »

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಗೆ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು ಗ್ರಾಮೀಣ ಪತ್ರಕರ್ತರಿಗೆ ವೃತ್ತಿಗೆ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ವಿತರಣೆಗೆ ಸರ್ಕಾರ ಆದೇಶಿಸಿದೆ. ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಡಿ 2024-25ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆ 431ರಲ್ಲಿ “ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಅವಕಾಶ. ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಗೆ ರಾಜ್ಯ ಸರ್ಕಾರ ಆದೇಶ Read More »

ಕೊಬ್ಬರಿ ಎಣ್ಣೆ, ತೆಂಗಿನಕಾಯಿ ಪುಡಿಗೂ ಬೆಲೆ ಹೆಚ್ಚಳ

ಸಮಗ್ರ ನ್ಯೂಸ್:ತೆಂಗಿನಕಾಯಿಗೆ ದರ ಕಡಿಮೆ ಎಂದು ತೆಂಗಿನಕಾಯಿ ಬೆಳೆಯೋ ರೈತರು ಬೇಸರ ಮಾಡಿಕೊಂಡಿದ್ದರು. ಕಳೆದ ತಿಂಗಳು ಕೆ.ಜಿಗೆ 25 ರೂ.ಗೆ ಕುಸಿತ ಕಂಡಿತ್ತು. ಆದರೆ ಇದೀಗ ತೆಂಗಿನಕಾಯಿ ದರ 50 ರೂ. ತಲುಪಿದೆ. ಇದು ತೆಂಗು ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ತೆಂಗಿನಕಾಯಿ ದರ ಇಳಿದ ಪರಿಣಾಮ ಅನೇಕ ರೈತರು ಎಳನೀರನ್ನೇ ಮಾರಟ ಮಾಡಿದ್ದರು. ಎಳನೀರು ದರ ತೆಂಗಿನಕಾಯಿಗಿಂತ ಹೆಚ್ಚಿದೆ.ಮಾರುಕಟ್ಟೆಗೆ ತೆಂಗಿನಕಾಯಿ ಕಡಿಮೆ ಪೂರೈಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಿದೆ. ಹಾಗಾಗಿ ದರದಲ್ಲೂ ಏರಿಕೆ ಕಂಡಿದೆ

ಕೊಬ್ಬರಿ ಎಣ್ಣೆ, ತೆಂಗಿನಕಾಯಿ ಪುಡಿಗೂ ಬೆಲೆ ಹೆಚ್ಚಳ Read More »

ಮದುವೆಯಾಗುವುದಾಗಿ ವಂಚನೆ ಆರೋಪ| ತೆಲುಗು ಯೂಟ್ಯೂಬರ್ ಹರ್ಷಸಾಯಿ ವಿರುದ್ದ ದೂರು ದಾಖಲು

ಸಮಗ್ರ ನ್ಯೂಸ್: ಸೋಶಿಯಲ್ ಮೀಡಿಯಾ ಸ್ಟಾರ್ ಹರ್ಷ ಸಾಯಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಈ ಹಿಂದೆ ಬೆಟ್ಟಿಂಗ್ ಆಪ್‌ಗಳನ್ನು ಪ್ರಚಾರ ಮಾಡಿದ ಆರೋಪ ಹೊತ್ತಿದ್ದ ಹರ್ಷ ವಿರುದ್ಧ ಯುವತಿಯೊಬ್ಬರು ಪೊಲೀಸ್ ದೂರು ದಾಖಲಿಸಿದ್ದಾರೆ. ಮದುವೆ ಹೆಸರಲ್ಲಿ ಮೋಸ ಮಾಡಿದ್ದಾರೆ ಎಂದು ಯೂಟ್ಯೂಬರ್ ಹರ್ಷ ಸಾಯಿ ವಿರುದ್ಧ ಯುವತಿ ದೂರು ನೀಡಿದ್ದಾರೆ. ನರಸಿಂಗಿ ಪಿಎಸ್‌ಗೆ ಯುವತಿಯೊಬ್ಬಳು ವಕೀಲರ ಜೊತೆ ಬಂದು ಹರ್ಷಸಾಯಿ ವಿರುದ್ಧ ವಂಚನೆ ಮತ್ತು ಅತ್ಯಾಚಾರ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ. ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಯೂಟ್ಯೂಬ್‌ನಲ್ಲಿ ಸುಮಾರು 14

ಮದುವೆಯಾಗುವುದಾಗಿ ವಂಚನೆ ಆರೋಪ| ತೆಲುಗು ಯೂಟ್ಯೂಬರ್ ಹರ್ಷಸಾಯಿ ವಿರುದ್ದ ದೂರು ದಾಖಲು Read More »