September 2024

ವ್ಯಾಪಾರಿಗಳು ಗುರುತು ಪ್ರಕಟಿಸುವುದು ಕಡ್ಡಾಯ/ ಹಿಮಾಚಲ ಪ್ರದೇಶ ಸರ್ಕಾರ ಆದೇಶ

ಸಮಗ್ರ ನ್ಯೂಸ್‌: ಪ್ರತಿಯೊಬ್ಬ ಅಂಗಡಿ ಮಾಲೀಕ ಹಾಗೂ ಬೀದಿ ಬದಿಯ ವ್ಯಾಪಾರಿ ತಮ್ಮ ಗುರುತನ್ನು ಪ್ರಕಟಿಸುವುದನ್ನು ಹಿಮಾಚಲ ಪ್ರದೇಶ ಸರ್ಕಾರ ಕೂಡ ಕಡ್ಡಾಯಗೊಳಿಸಿದೆ. ಲೋಕೋಪಯೋಗಿ ನಗರ ಇಲಾಖೆ ಹಾಗೂ ಪುರಸಭಾ ನಿಗಮದೊಂದಿಗೆ ಸಭೆ ನಡೆಸಿದ ಬಳಿಕ ಔಟ್ ಲೆಟ್ ಗಳ ವ್ಯಾಪಾರಿಗಳು ತಮ್ಮ ಗುರುತನ್ನು ಬಹಿರಂಗಪಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ, ಸಚಿವ, ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ. ರಸ್ತೆ ಬದಿಗಳಲ್ಲಿ ಮಾರಾಟ ಮಾಡುವ ಆಹಾರದ ಶುದ್ಧತೆ ಬಗ್ಗೆ ಅನುಮಾನಗಳು ಮೂಡುತ್ತಿರುವುದರ ಬಗ್ಗೆ ಜನತೆ ತೀವ್ರ ಕಳವಳ ವ್ಯಕ್ತಪಡಿಸುತ್ತಿದ್ದಾರೆ. […]

ವ್ಯಾಪಾರಿಗಳು ಗುರುತು ಪ್ರಕಟಿಸುವುದು ಕಡ್ಡಾಯ/ ಹಿಮಾಚಲ ಪ್ರದೇಶ ಸರ್ಕಾರ ಆದೇಶ Read More »

ತಿರುಪತಿ ಲಡ್ಡು ವಿವಾದ/ ಪುರಿಯ ಜಗನ್ನಾಥ ದೇವಸ್ಥಾನದಲ್ಲೂ ತುಪ್ಪದ ಪರೀಕ್ಷೆಗೆ ಸಿದ್ಧತೆ

ಸಮಗ್ರ ನ್ಯೂಸ್‌: ತಿರುಪತಿ ಲಡ್ಡು ಪ್ರಸಾದದ ವಿವಾದದ ಬೆನ್ನಲ್ಲೇ ಒಡಿಶಾದ ಪುರಿಯ ಜಗನ್ನಾಥ ದೇವಸ್ಥಾನದಲ್ಲಿ ಪ್ರಸಾದಕ್ಕೆ ಬಳಸಲಾಗುವ ತುಪ್ಪದ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಪುರಿಯ ಜಗನ್ನಾಥ ದೇವಸ್ಥಾನದಲ್ಲಿ ನೈವೇದ್ಯ ತಯಾರಿಸಲು ಬಳಸುವ ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು ಒಡಿಶಾ ಸರ್ಕಾರ ನಿರ್ಧರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಗನ್ನಾಥ ದೇಗುಲದಲ್ಲಿ ಕಲಬೆರಕೆಯಂತಹ ಯಾವುದೇ ಆರೋಪಗಳಿಲ್ಲ. ಅದಾಗ್ಯೂ ಆಡಳಿತ ಮಂಡಳಿಯು ‘ಕೋತ ಬೋಗ’ (ದೇವತೆಗಳಿಗೆ ಪ್ರಸಾದ) ಮತ್ತು ‘ಬಾರಾಡಿ ಭೋಗ’ (ಆದೇಶದ ಮೇರೆಗೆ ಪ್ರಸಾದ) ತಯಾರಿಸಲು ಬಳಸುವ ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು

ತಿರುಪತಿ ಲಡ್ಡು ವಿವಾದ/ ಪುರಿಯ ಜಗನ್ನಾಥ ದೇವಸ್ಥಾನದಲ್ಲೂ ತುಪ್ಪದ ಪರೀಕ್ಷೆಗೆ ಸಿದ್ಧತೆ Read More »

ಜಮ್ಮು- ಕಾಶ್ಮೀರ ವಿಧಾನಸಭೆ ಚುನಾವಣೆ/ ಎರಡನೇ ಹಂತದಲ್ಲಿ ಶೇಕಡಾ 54 ರಷ್ಟು ಮತದಾನ

ಸಮಗ್ರ ನ್ಯೂಸ್‌: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಬುಧವಾರ ಮುಕ್ತಾಯವಾಗಿದ್ದು, ಸಂಜೆ 5 ಗಂಟೆಯವರೆಗೆ ಶೇಕಡಾ 54 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದ. 26 ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೇರಿದಂತೆ 239 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಬಿಗಿ ಭದ್ರತೆಯ ನಡುವೆ 26 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ನಡೆದಿದೆ. ಜಮ್ಮು ಪ್ರದೇಶದ ಗುಲಾಬ್‌ಗಡ (ST) ಕ್ಷೇತ್ರದಲ್ಲಿ ಅತ್ಯಧಿಕ ಅಂದರೆ ಶೇಕಡಾ 65.57

ಜಮ್ಮು- ಕಾಶ್ಮೀರ ವಿಧಾನಸಭೆ ಚುನಾವಣೆ/ ಎರಡನೇ ಹಂತದಲ್ಲಿ ಶೇಕಡಾ 54 ರಷ್ಟು ಮತದಾನ Read More »

ಮಹಾಲಕ್ಷ್ಮಿ ಕೊಲೆ ಪ್ರಕರಣ| ಆರೋಪಿ ಮುಕ್ತಿ‌ರಂಜನ್ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಮಹಾಲಕ್ಷ್ಮಿ ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಿ ದೇಹವನ್ನು 59 ತುಂಡುಗಳಾಗಿ ಕತ್ತರಿಸಿದ ಹಂತಕ ಮುಕ್ತಿ ರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಮುಕ್ತಿ ರಂಜನ್ ರಾಯ್ ಪಶ್ಚಿಮ ಬಂಗಾಳಕ್ಕೆ ಹೋಗಿದ್ದಾನೆ ಎಂದು ವರದಿಯಾಗಿತ್ತು. ಆದರೆ ಆರೋಪಿ ಒಡಿಶಾದಲ್ಲಿ ಅಡಗಿದ್ದಾನೆ ಎಂಬ ಮಾಹಿತಿ ಇದೆ. ಪೊಲೀಸರು ಆರೋಪಿಯ ಜಾಡು ಹಿಡಿದು ಒಡಿಶಾಗೆ ತೆರಳಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದರು. ಇದೀಗ ಆರೋಪಿ

ಮಹಾಲಕ್ಷ್ಮಿ ಕೊಲೆ ಪ್ರಕರಣ| ಆರೋಪಿ ಮುಕ್ತಿ‌ರಂಜನ್ ಆತ್ಮಹತ್ಯೆಗೆ ಶರಣು Read More »

ಶಿರೂರು ಗುಡ್ಡ ಕುಸಿತ ಪ್ರಕರಣ| ನಾಪತ್ತೆಯಾಗಿದ್ದ ಅರ್ಜುನ್ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಶಿರೂರು ಗಂಗಾವಳಿ ನದಿಯಲ್ಲಿ ಆರನೇ ದಿನವೂ ಕಾರ್ಯಾಚರಣೆ ಮುಂದುವರಿದಿದ್ದು, ನದಿಯಲ್ಲಿ ಮುಳುಗಿದ್ದ ಕೇರಳದ ಲಾರಿ ಪತ್ತೆಯಾಗಿದೆ ಎಂದು ಕಾರ್ಯಾಚರಣೆ ಮಾಡುತ್ತಿರುವ ತಂಡ ತಿಳಿಸಿದೆ. ಡ್ರಜ್ಜಿಂಗ್ ಯಂತ್ರ ಹಾಗೂ ಕ್ರೇನ್ ಮೂಲಕ ಲಾರಿ ಮೇಲೆತ್ತುವ ಪ್ರಕ್ರಿಯೆ ಕೆಲವೇ ಕ್ಷಣದಲ್ಲಿ ಆರಂಭವಾಗಲಿದೆ.

ಶಿರೂರು ಗುಡ್ಡ ಕುಸಿತ ಪ್ರಕರಣ| ನಾಪತ್ತೆಯಾಗಿದ್ದ ಅರ್ಜುನ್ ಮೃತದೇಹ ಪತ್ತೆ Read More »

ಕರ್ನಾಟಕದ ಅಡಿಕೆ ಬೆಳೆಗಾರರಲ್ಲಿ ಆತಂಕ ಮೂಡಿಸಿದೆ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್:ಭೂತಾನ್‌ ದೇಶದಿಂದ 17 ಸಾವಿರ ಮೆಟ್ರಿಕ್ ಟನ್ ಅಡಿಕೆಯನ್ನು ಷರತ್ತು ರಹಿತವಾಗಿ ಆಮದು ಮಾಡಿಕೊಳ್ಳಲು ಕೇಂದ್ರ ಸರಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಕರ್ನಾಟಕದ ಅಡಿಕೆ ಬೆಳೆಗಾರರಲ್ಲಿ ಆತಂಕ ಮೂಡಿಸಿದೆ. 2022 ಸೆಪ್ಟೆಂಬರ್‌ನಲ್ಲಿ ಕನಿಷ್ಟಆಮದು ಬೆಲೆಯ ಷರತ್ತು ಇಲ್ಲದೆ 17 ಸಾವಿರ ಮೆಟ್ರಿಕ್ ಟನ್ ಅಡಿಕೆಯನ್ನು ಆಮದು ಮಾಡಿ ಕೇಂದ್ರ ಸರಕಾರ ಅನುಮತಿ ನೀಡಿತ್ತು.ಇದರಿಂದಾಗಿ ದೇಶಿ ಮಾರುಕಟ್ಟೆಯ ಮೇಲೆ ಸ್ವಲ್ಪ ಪ್ರಮಾಣದಲ್ಲಿ ದುಷ್ಪರಿಣಾಮ ಆಗಿತ್ತು.ಆಮದಿನ ವಿರುದ್ಧ ರೈತರು ಸಂಘಟನೆಯವರಿಂದ ಧ್ವನಿಸತ್ತಿದ್ದರಿಂದ ಅಡಿಕೆ ಆಮಾದಾಗಿರಲಿಲ್ಲ. ಕಳೆದ ಬಾರಿ ಆಮದು

ಕರ್ನಾಟಕದ ಅಡಿಕೆ ಬೆಳೆಗಾರರಲ್ಲಿ ಆತಂಕ ಮೂಡಿಸಿದೆ ಕೇಂದ್ರ ಸರ್ಕಾರ Read More »

ಅಂಗನವಾಡಿ ಶಿಕ್ಷಕಿ ಹುದ್ದೆಗೆ ಉರ್ದು ಕಡ್ಡಾಯ ಆದೇಶಕ್ಕೆ ವಿರೋಧ

ಸಮಗ್ರ ನ್ಯೂಸ್:ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಅಂಗನವಾಡಿ ಶಿಕ್ಷಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ.ಕನ್ನಡ ಪರ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಪ್ರದೇಶದಲ್ಲಿ ಮುಸ್ಲಿಂ ಸಮುದಾಯ ಹೆಚ್ಚಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಉರ್ದು ಕಡ್ಡಾಯವಾಗಿ ತಿಳಿದಿರಬೇಕು ಎಂದು ಹೇಳಲಾಗಿತ್ತು.ಉರ್ದು ಭಾಷೆ ಕಡ್ಡಾಯಗೊಳಿಸಿರುವ ಸರ್ಕಾರ,ಕನ್ನಡ ನಾಡಿನಲ್ಲಿ ಉರ್ದು ಹೇರಿಕೆ ಮಾಡುತ್ತಿದೆ ಕಾಂಗ್ರೆಸ್‌ ಸರ್ಕಾರ. ಸಿಎಂ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್

ಅಂಗನವಾಡಿ ಶಿಕ್ಷಕಿ ಹುದ್ದೆಗೆ ಉರ್ದು ಕಡ್ಡಾಯ ಆದೇಶಕ್ಕೆ ವಿರೋಧ Read More »

ಸಿಎಂ ವಿರುದ್ದದ ಮುಡಾ ಹಗರಣ| ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸಲು ‌ಕೋರ್ಟ್ ಆದೇಶ

ಸಮಗ್ರ ನ್ಯೂಸ್: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿದೆ. ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಿದ್ದರು.

ಸಿಎಂ ವಿರುದ್ದದ ಮುಡಾ ಹಗರಣ| ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸಲು ‌ಕೋರ್ಟ್ ಆದೇಶ Read More »

ಗಂಡ ಹೆಂಡತಿ ಜಗಳಕ್ಕೆ ಬಲಿಯಾದ 5 ವರ್ಷದ ಮಗು..

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತಂದೆಯಿಂದಲೇ ಬಾಲಕಿ ಕೊಲೆಯಾಗಿದ್ದಾಳೆ ಎಂಬ ಮಾಹಿತಿಯನ್ನು ಪೊಲೀಸರು ಬಿಚ್ಚಿಟ್ಟಿದ್ದಾರೆ. ಇದೀಗ ಮಗಳನ್ನು ಹತ್ಯೆಗೈದ ತಂದೆ ಮಂಜುನಾಥ್ನನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್, ಮಂಗಳ ಪ್ರೀತಿಸಿ ಮದುವೆಯಾದವರು. ಆದರೂ ನಿತ್ಯ ಜಗಳವಾಡುತ್ತಿದ್ದರು. ಹೆಂಡತಿ ಮೇಲೆ ಅನೈತಿಕ ಸಂಬಂಧದ ಅನುಮಾನ ಹೊಂದಿದ್ದನು. ಇನ್ನೂ ಮಗಳ ಹುಟ್ಟಿನ ಬಗ್ಗೆ

ಗಂಡ ಹೆಂಡತಿ ಜಗಳಕ್ಕೆ ಬಲಿಯಾದ 5 ವರ್ಷದ ಮಗು.. Read More »

ಪುತ್ತೂರಿನಿಂದ‌‌ ರೋಗಿಯನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಪಲ್ಟಿ| ರೋಗಿ‌ ಸಾವು; ಮೂವರಿಗೆ ಗಾಯ

ಸಮಗ್ರ ನ್ಯೂಸ್: ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬುಲೆನ್ಸ್ ಪಲ್ಟಿಯಾದ ಪರಿಣಾಮ ಆಂಬ್ಯುಲೆನ್ಸ್ ನಲ್ಲಿದ್ದ ರೋಗಿಯೋರ್ವರು ಮೃತಪಟ್ಟು, ಅವರ ಪತ್ನಿ, ಮಗ ಹಾಗೂ ಸಂಬಂಧಿಕರೋರ್ವ ಗಾಯಗೊಂಡ ಘಟನೆ ಮಂಗಳೂರು ಪಡೀಲು ಸಮೀಪ ನಡೆದಿದೆ. ಮೃತ ರೋಗಿಯನ್ನು ಕಡಬ ತಾಲೂಕಿನ ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ(73) ಎಂದು ಗುರುತಿಸಲಾಗಿದೆ. ಹಳೆನೇರೆಂಕಿ ಗ್ರಾಮದ ಕದ್ರ ನಿವಾಸಿ, ಕೂಲಿಕಾರ್ಮಿಕ ದಾಸಪ್ಪ ರೈಯವರಿಗೆ ಮಂಗಳವಾರದಂದು ತಡರಾತ್ರಿ 1.30ರ ವೇಳೆಗೆ ಸ್ಟ್ರೋಕ್ ಆಗಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಮನೆ ಸಮೀಪದ ನಿವಾಸಿ,

ಪುತ್ತೂರಿನಿಂದ‌‌ ರೋಗಿಯನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಪಲ್ಟಿ| ರೋಗಿ‌ ಸಾವು; ಮೂವರಿಗೆ ಗಾಯ Read More »