Ad Widget .

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಕಾಲಿವುಡ್ ನಟ ರಜನಿಕಾಂತ್ ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ 73 ವರ್ಷ. ವಯಸ್ಸು ಆದಂತೆ ಅವರಿಗೆ ಅನಾರೋಗ್ಯ ಸಮಸ್ಯೆ ಕೂಡ ಹೆಚ್ಚುತ್ತಿದೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಆತಂಕಗೊಂಡಿದ್ದಾರೆ.

Ad Widget . Ad Widget .

ಸೆಪ್ಟೆಂಬರ್ 30ರ ತಡರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ಕಾರಣದಿಂದ ಅವರನ್ನು ತಕ್ಷಣವೇ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಈ ವೇಳೆ ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗಿದೆ. ಹೃದಯರೋಗ ತಜ್ಞ ಸಾಯಿ ಸತೀಶ್ ಅವರು ರಜನಿ ಅವರನ್ನು ಪರೀಕ್ಷೆ ಮಾಡಿದ್ದಾರೆ. ಈಗ ರಜನಿಕಾಂತ್ ಆರೋಗ್ಯ ಸುಸ್ಥಿರವಾಗಿದೆ.

Ad Widget . Ad Widget .

ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ ಅಕ್ಟೋಬರ್ 10ರಂದು ರಿಲೀಸ್ ಆಗುತ್ತಿದೆ. ರಜನಿಕಾಂತ್ ಅಮಿತಾಭ್ ಬಚ್ಚನ್, ಫಹಾದ್ ಫಾಸಿಲ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ರಿಲೀಸ್ ಸಂದರ್ಭದಲ್ಲಿ ಈ ತರಹ ಘಟನೆ ನಡೆದಿದ್ದು ಅಭಿಮಾನಿಗಳಿಗೆ ಬೇಸರವಾಗಿದೆ.

Leave a Comment

Your email address will not be published. Required fields are marked *