Ad Widget .

ಗನ್‌ನಿಂದ ಕಾಲಿಗೆ ಶೂಟ್ ಮಾಡಿಕೊಂಡ ನಟ ಗೋವಿಂದ

ಸಮಗ್ರ ನ್ಯೂಸ್:ನಟ ಗೋವಿಂದ ಅವರು ತಮ್ಮದೇ ಗನ್‌ನಿಂದ ಕಾಲಿಗೆ ಶೂಟ್ ಮಾಡಿಕೊಂಡಿದ್ದಾರೆ.ಮುಂಜನೆ 5 ಗಂಟೆ ಸುಮಾರಿಗೆ ಆಕಸ್ಮಿಕವಾಗಿ ನಡೆದಿರೋ ಘಟನೆ. ಬುಲೆಟ್‌ ಫೈಯರ್ ಆಗಿದ್ದು, ಅವರ ಕಾಲಿಗೆ ತಾಗಿದೆ.ಅವರನ್ನು ಅಂಧೇರಿಯ ಕೃತಿ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮುಂಬೈನಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.ಗುಂಡಿನ ಶಬ್ದ ಕೇಳಿದ ಬಳಿಕ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಗೋವಿಂದ ಅವರ ಗನ್‌ನ ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ. ‘ನಟ ಹಾಗೂ ಶಿವಸೇನಾ ಮುಖ್ಯಸ್ಥ ಗೋವಿಂದ ಕೋಲ್ಕತ್ತಾ ತೆರಳಲು ರೆಡಿ ಆಗುತ್ತಿದ್ದರು.

Ad Widget . Ad Widget . Ad Widget .

ಅವರು ತಮ್ಮ ಪರವಾನಗಿ ಗನ್‌ನ ಇಟ್ಟುಕೊಳ್ಳುತ್ತಿದ್ದರು. ಅದು ಅವರ ಕೈ ತಪ್ಪಿದ್ದು, ಬುಲೆಟ್ ಸಿಡಿದಿದೆ. ಅವರ ಕಾಲಿಗೆ ಗುಂಡು ತಾಗಿದೆ. ವೈದ್ಯರು ಬುಲೆಟ್‌ನ ತೆಗೆದಿದ್ದಾರೆ. ಅವರು ಆಸ್ಪತ್ರೆಯಲ್ಲಿ ಇದ್ದು, ಆರೋಗ್ಯ ಸ್ಥಿರವಾಗುತ್ತಿದೆ’ ಎಂದು ಗೋವಿಂದ ಅವರ ಮ್ಯಾನೇಜ‌ರ್ ಶಶಿ ಸಿನ್ಹಾ ಹೇಳಿದ್ದಾರೆ.

ಗೋವಿಂದ ಅವರು ಬಾಲಿವುಡ್‌ನಲ್ಲಿ ಹಲವು ಸೂಪ‌ರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರಿಗೆ ಹಿಂದಿ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇತ್ತು. ಆದರೆ, ಈಗ ಮೊದಲಿನ ಬೇಡಿಕೆ ಉಳಿದಿಲ್ಲ. ಅವರು ಚಿತ್ರರಂಗದಲ್ಲಿ ಅಷ್ಟಾಗಿ ಆಯಕ್ಟಿವ್ ಆಗಿಲ್ಲ. ಅಲ್ಲೊಂದು ಇಲ್ಲೊಂದು ಬ್ರಾಂಡ್‌ಗಳನ್ನು ಪ್ರಚಾರ ಮಾಡಿಕೊಂಡು ಸಮಯ ಕಳೆಯುತ್ತಿದ್ದಾರೆ.ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ರಂಗೀಲ ರಾಜ’ ಸಿನಿಮಾದಲ್ಲಿ. ಈ ಚಿತ್ರ 2019ರಲ್ಲಿ ರಿಲೀಸ್‌ ಆಯಿತು.

Leave a Comment

Your email address will not be published. Required fields are marked *