ಕುಂದಾಪುರ: ಯಮ ಸ್ವರೂಪಿಯಾಗಿ ಬಂದ‌ ಟಿಪ್ಪರ್ |ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಕೋಟೇಶ್ವರ ಹಾಲಾಡಿ ರಸ್ತೆಯ ಕಕ್ಕೇರಿ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಧನುಷ್(19 ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

Ad Widget ... ..

ನಾಗೂರು ನಿವಾಸಿಯಾಗಿರುವ ಧನುಷ್ ಕೋಟೇಶ್ವರದ ಕಾಳವರ ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ ಸಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

Ad Widget

ಇಂದು ಮಧ್ಯಾಹ್ನ ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ಧನುಷ್ ಕೋಟೇಶ್ವರದತ್ತ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ. ಈ ವೇಳೆ ವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಧನುಷ್ ಸಾವನ್ನಪ್ಪಿದ್ದಾರೆ.ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಕುಂದಾಪುರ ಸಂಚಾರ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *