Ad Widget .

ದಸರಾ ಆಚರಣೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ನವರಾತ್ರಿ ಉತ್ಸವದ ಆಚರಣೆಯ ಹಿನ್ನಲೆಯಲ್ಲಿ ಅ.3ರಿಂದ 13ರ ವರೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಶಾರದಾ ದೇವಿಯ ವಿಗ್ರಹ ಪ್ರತಿಷ್ಠಾಪನೆ ಮತ್ತು ವಿಸರ್ಜನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Ad Widget . Ad Widget .

ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಯಾವುದೇ ಅಹಿತಕರ ಘಟನೆಗಳಿಗೆ ಕಾರಣವಾಗದಂತೆ ತಡೆಯಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ದಸರಾ ಮೆರವಣಿಗೆ ಸಾಗುವ ಪ್ರದೇಶಗಳಲ್ಲಿ ಆಯಾ ದಿನಗಳಂದು ಬಾರ್‌ ಮತ್ತು ಮದ್ಯದ ಅಂಗಡಿಗಳಲ್ಲಿ, ಶೇಂದಿ ಅಂಗಡಿಗಳಲ್ಲಿ ಅಮಲು ಪದಾರ್ಥ ಮಾರಾಟ ಮಾಡದಂತೆ ಹಾಗೂ ಅಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಅವರು ಆದೇಶಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *