Ad Widget .

ಬಿಎಂಟಿಸಿ ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕನೋರ್ವನಿಂದ ಚಾಕು ಇರಿತ

ಸಮಗ್ರ ನ್ಯೂಸ್: ಬಿಎಂಟಿಸಿ ಬಸ್ ಕಂಡಕ್ಟರ್ ನನ್ನು ಪ್ರಯಾಣಿಕನೋರ್ವ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್ಫೀಲ್ಡ್ ಬಳಿಯ ITPL ಬಸ್ ಸ್ಟಾಪ್ ಬಳಿ ನಡೆದಿದೆ.

Ad Widget . Ad Widget .

ಅಕ್ಟೋಬರ್ 01 ಸಂಜೆ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ KA- 57-F0015 ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ ನಡೆದಿದೆ. ನಂತರ ಬಸ್ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ. ಇದನ್ನು ನೋಡಿದ ಪ್ರಯಾಣಿಕರು ಕಿರುಚಾಡಿಕೊಂಡು ಬಸ್ ನಿಂದ ಕೆಳಗೆ ಇಳಿದು ಓಡಿ ಹೋಗಿದ್ದಾರೆ. ಸ್ಥಳಕ್ಕೆ ವೈಟ್ ಫೀಲ್ಡ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

Ad Widget . Ad Widget .

ಚಾಕು ಇರಿತಕ್ಕೆ ಒಳಗಾಗಿರುವ ಕಂಡಕ್ಟರ್ ಯೋಗೇಶ್ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಚಾಕು ಇರಿದ ಪ್ರಯಾಣಿಕ ಇಂದು ಬೆಳಿಗ್ಗೆ ಖಾಸಗಿ ಕಂಪನಿಗೆ ಇಂಟರ್ವಿವ್ ಗೆ ಹೋಗಿದ್ದನಂತೆ. ಈ ವೇಳೆ ಆತನಿಗೆ ಕೆಲಸ ಸಿಕ್ಕಿಲ್ಲವಂತೆ. ಅದಕ್ಕಾಗಿ ನಾನು ಹೊರಗೆ ಇರುವುದಿಲ್ಲ. ಜೈಲಿಗೆ ಹೋಗ್ತಿನಿ ಎಂದು ಈ ರೀತಿ ಮಾಡಿದ್ದಾನೆ ಎನ್ನುವ ಮಾಹಿತಿ ಲಭಿಸಿದೆ.

Leave a Comment

Your email address will not be published. Required fields are marked *