Ad Widget .

ಅಶೋಕ್ ವಿರುದ್ಧ ನೂರಾರು ಕೋಟಿ ಭೂ ಅಕ್ರಮ ಆರೋಪ.. ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್

ಸಮಗ್ರ ನ್ಯೂಸ್: ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧದ ನೂರಾರು ಕೋಟಿ ರೂ. ಬೆಲೆಬಾಳುವ ಜಮೀನಿನ ಹಗರಣದ ದಾಖಲೆಯನ್ನು ಕಾಂಗ್ರೆಸ್ ಸಚಿವರು ಇದೀಗ ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮತ್ತು ಸಚಿವ ಹೆಚ್.ಕೆ ಪಾಟೀಲ್ ರಿಂದ ದಾಖಲೆ ಬಿಡುಗಡೆ ಮಾಡಲಾಗಿದೆ.

Ad Widget . Ad Widget .

ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಾಲದಲ್ಲಿ ಏನಾಗಿತ್ತು ಎಂಬುದನ್ನು ನಿಮ್ಮ ಮುಂದೆ ತರುತ್ತಿದ್ದೇವೆ. ಲೊಟ್ಟೆಗೊಲ್ಲಹಳ್ಳಿ ನೂರಾರು ಕೋಟಿ ರೂ. ಬೆಲೆ ಬಾಳುವ ಜಮೀನಿನ ಹಗರಣ ಇದು. ವಿತ್ ರೆಕಾರ್ಡ್ಸ್ ನಾವು ನಿಮ್ಮ ಮುಂದೆ ಮಂಡಿಸುತ್ತೇವೆ. ಲೊಟ್ಟೆಗೊಲ್ಲಹಳ್ಳಿ ಸರ್ವೆ ನಂಬರ್ 10/1 ರಲ್ಲಿ 32 ಗುಂಟೆ ಜಮೀನನ್ನು ಬಿಡಿಎ ನೋಟಿಫೈ ಮಾಡಿತ್ತು. 1977 ಫೆಬ್ರವರಿಯಲ್ಲಿ ಬಿಡಿಎ ಭೂಸ್ವಾಧೀನಕ್ಕೆ ಮೊದಲ ನೊಟಿಫಿಕೇಷನ್ ಹೊರಡಿಸಿತ್ತು.

Ad Widget . Ad Widget .

26 ಫೆಬ್ರವರಿ 2003ರಲ್ಲಿ ಹಾಗೂ 2007ರಲ್ಲಿ ಈ ಜಮೀನನ್ನು ಅಕ್ರಮವಾಗಿ ಕಬಳಿಸಲಾಗಿದೆ. ಬಿಡಿಎ ನೊಟಿಫಿಕೇಷನ್​ಗೂ ಮೊದಲು ಈ ಜಮೀನು ರಾಮಸ್ವಾಮಿ ಎನ್ನುವವರ ಒಡೆತನದಲ್ಲಿತ್ತು. ಅದಾದ ಬಳಿಕ ಈ ಜಮೀನು 26 ವರ್ಷ ಬಿಡಿಎ ಒಡೆತನದಲ್ಲಿತ್ತು. ಆದರೆ 2003ರಲ್ಲಿ ಒಂದು ಬಾರಿ ಹಾಗೂ 2007ರಲ್ಲಿ ಆರ್ ಅಶೋಕ್ ಶುದ್ಧಕ್ರಯ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಆಗಿನ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪನವರು ಆ ಕಡತದ ಮೇಲೆ ‘ಕೂಡಲೇ ಮಂಡಿಸಿ’ ಎಂದು ಬರೆದು ಸಹಿ ಹಾಕಿದ್ದಾರೆ. ಅಸಲಿಗೆ ಈ ಸರ್ವೇ ನಂಬರ್ ಜಮೀನಿನ ಮಾಲೀಕತ್ವ 1977ರಲ್ಲಿ ಬಂದಿದೆ. ಆದರೆ ರಾಮಸ್ವಾಮಿಯಿಂದ ಆರ್ ಅಶೋಕ್ ಕ್ರಯ ಮಾಡಿಸಿಕೊಂಡಿದ್ದಾರೆ. ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಜಿವಿ ಅತ್ರಿ ಎಂಬವರು ಲೋಕಾಯುಕ್ತದಲ್ಲಿ ಈ ಕೇಸ್​ಗೆ ಸಂಬಂಧ ಪೆಟಿಷನ್ ಹಾಕಿದ್ದರು. ಪೆಟಿಷನ್ ಲೋಕಾಯುಕ್ತಕ್ಕೆ ಸಲ್ಲಿಕೆಯಾದ ಮೇಲೆ ಆರ್ ಅಶೋಕ್ ಜಮೀನು ವಾಪಾಸ್ ಕೊಡುವ ನಿರ್ಧಾರ ಮಾಡುತ್ತಾರೆ. 28/07/2011ರಲ್ಲಿ ಬಿಡಿಎಗೆ ವಾಪಾಸ್ ಕೊಡುವ ಬಗ್ಗೆ ಪತ್ರ ಬರೆದಿದ್ದರು. ಬಿಡಿಎ ಸ್ವತ್ತನ್ನೇ ಆರ್ ಅಶೋಕ್ ವಾಪಾಸ್ ಬಿಡಿಗೆ ಕೊಡಲು ಯಾರು ಈತ? ಈ ಕೇಸ್ ಹೈ ಕೋರ್ಟ್ ಮೆಟ್ಟಿಲೇರುತ್ತೆ. ಈ ವೇಳೆ ಹೈ ಕೋರ್ಟ್ ಈ ಜಾಗ ಸದ್ಯ ಬಿಡಿಎ ಕೈಯಗೆ ಸೇರಿದೆ. ಹೀಗಾಗಿ ಆರೋಪಿತರ ಮೇಲೆ ಯಾವುದೇ ಕ್ರಿಮಿನಲ್ ಕೇಸ್ ಹಾಕುವ ಅಗತ್ಯ ಇಲ್ಲ ಎಂದು ಹೈ ಕೋರ್ಟ್ ಹೇಳಿತ್ತು ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *