ಸಮಗ್ರ ನ್ಯೂಸ್:ಬೆಂಗಳೂರಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಜಾಗೃತ ಕರ್ನಾಟಕ ಮತ್ತು ಅಹರ್ನಿಶಿ ಪ್ರಕಾಶನ ಆಯೋಜಿಸಿದ್ದ ‘ಗಾಂಧೀಜಿಯ ಹಂತಕ’ ಪುಸ್ತಕ ಬಿಡುಗಡೆ, ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾವರ್ಕರ್ ಗೋಹತ್ಯೆಯ ವಿರೋಧಿಯಲ್ಲ. ಅವರು ಚಿತ್ಪಾವನ ಬ್ರಾಹ್ಮಣರಾಗಿದ್ದರಾದರೂ ಮತ್ತು ಮಾಂಸಹಾರಿ ಎಂದು ಸಚಿವ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹಾಗೆ ನೋಡಿದರೆ ಸಾವರ್ಕರ್ ಒಂದು ರೀತಿಯಲ್ಲಿ ಮಾಡರ್ನಿಸ್ಟ್ ಆಗಿಯೂ ಕಾಣುತ್ತಾರೆ. ಆದರೆ ಮೂಲಭೂತವಾದಿಯಾಗಿದ್ದರುಇದು ಭಾರತ ದೇಶದ ಸಂಸ್ಕೃತಿಯಲ್ಲ.ಗಾಂಧೀಜಿಯವರು ಸಸ್ಯಹಾರಿ, ನಮ್ಮ ಸಂಸ್ಕೃತಿ ಸಂಪ್ರದಾಯಗಳ ಮೇಲೆ ಗಾಂಧೀಜಿಯವರಿಗೆ ಅಪಾರವಾದ ನಂಬಿಕೆ ಇತ್ತು.
ದೇಶದಲ್ಲಿ ಗಾಂಧೀವಾದ ಗೆಲ್ಲಬೇಕೇ ಹೊರತು ಸಾವರ್ಕರ್ ಅವರ ವಾದ ಅಲ್ಲ. ಗೋಡೈಗೆ ಉತ್ತರ ಗಾಂಧೀಜಿಯವರೇ. ಗಾಂಧೀಜಿಯವರ ಹತ್ಯೆ ಮಾಡಿದ ಗೋಡೈ, ಸಾವರ್ಕರ್ ವಾದದಿಂದ ಪ್ರಭಾವಿತರಾಗಿದ್ದರು. ದೇಶದಲ್ಲಿ ಇಂದು ಗಾಂಧೀವಾದದ ಎದುರು ಸಾವರ್ಕರ್ ಅವರ ವಾದ ಗೆಲ್ಲುತ್ತಿದೆಯೇ ಎಂಬ ಅನುಮಾನ ನಮ್ಮನ್ನು ಕಾಡುತ್ತಿರುವುದು ನಿಜಕ್ಕೂ ಆತಂಕಕಾರಿ ಬೆಳವಣಿಗೆ.
ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು ಎಂಬುದು ಅವರ ಅಭಿಮಾನಿಗಳ ವಾದ. ಬ್ರಿಟಿಷರು ಅವರನ್ನು ಜೈಲಿಗೂ ಹಾಕಿದ್ದರು. ಈ ವಿಚಾರವನ್ನು ಮುಂದಿಟ್ಟುಕೊಂಡು ಅವರನ್ನು ಎದುರಿಸುವುದು ಕಷ್ಟ ಎಂದು ದಿನೇಶ್ ಗುಂಡೂರಾವ್ ಹೇಳಿದರು.